HomeLatest NewsBREAKING NEWS: ರಾಸಲೀಲೆ ವಿಡಿಯೋ ವೈರಲ್ ಬೆನ್ನಲ್ಲೇ ಡಿಜಿಪಿ ತಲೆದಂಡ: ರಾಮಚಂದ್ರರಾವ್ ಅಮಾನತುಗೊಳಿಸಿ ಸರ್ಕಾರ ಆದೇಶ

BREAKING NEWS: ರಾಸಲೀಲೆ ವಿಡಿಯೋ ವೈರಲ್ ಬೆನ್ನಲ್ಲೇ ಡಿಜಿಪಿ ತಲೆದಂಡ: ರಾಮಚಂದ್ರರಾವ್ ಅಮಾನತುಗೊಳಿಸಿ ಸರ್ಕಾರ ಆದೇಶ

ಬೆಂಗಳೂರು: ರಾಸಲೀಲೆ ವಿಡಿಯೋ ವೈರಲ್ ಆದ ಬೆನ್ನಲ್ಲೇ ಡಿಜಿಪಿ ರಾಮಚಂದ್ರ ರಾವ್ ಅವರನ್ನು ಸರ್ಕಾರ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.

ವಿಡಿಯೋ ವೈರಲ್ ಆದ ಬೆನ್ನಲ್ಲೇ ಅವರ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ರಾಮಚಂದ್ರರಾವ್ ಅವರನ್ನು ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಡಿಜಿಪಿ ರಾಮಚಂದ್ರ ರಾವ್ ಬೆಳಗಾವಿಯಲ್ಲಿ ಇದ್ದ ಸಂದರ್ಭದಲ್ಲಿನ ವಿಡಿಯೋ ಇದಾಗಿದೆ ಎಂದು ಹೇಳಲಾಗಿದೆ.

ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ(ಡಿಸಿಆರ್‌ಇ) ಡಿಜಿಪಿ ಕೆ. ರಾಮಚಂದ್ರ ರಾವ್ ಅವರು ತಮ್ಮ ಕಚೇರಿಯಲ್ಲಿ ಮಹಿಳೆಯೊಂದಿಗೆ ಆಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಬಗ್ಗೆ ವಿಚಾರಣೆ ನಡೆಸಿ ವರದಿ ಸಲ್ಲಿಸುವಂತೆ ಸಿಎಂ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಷ್ಟೇ ದೊಡ್ಡ ಅಧಿಕಾರಿಯಾದರೂ ಕಾನೂನಿಗಿಂತ ದೊಡ್ಡವರಲ್ಲ, ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಶಿಸ್ತು ಕ್ರಮಕ್ಕೆ ಸಿಎಂ ಸೂಚನೆ ನೀಡಿದ್ದರು. ಡಿಜಿಪಿ ರಾಮಚಂದ್ರ ರಾವ್ ಅವರನ್ನು ಅಮಾನತುಗೊಳಿಸುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ.ಎಂ.ಎ. ಸಲೀಂ ಅವರಿಗೆ ಸಿಎಂ ಸೂಚನೆ ನೀಡಿದ್ದು, ಇದರ ಬೆನ್ನಲ್ಲೇ ಕ್ರಮ ಕೈಗೊಳ್ಳಲಾಗಿದೆ.

ಘಟನೆಯ ಬಗ್ಗೆ ಸಿಎಂ ಗರಂ ಆಗಿದ್ದಾರೆ. ಕಚೇರಿಯಲ್ಲಿ ಅದರಲ್ಲಿಯೂ ಸಮವಸ್ತ್ರ ಧರಿಸಿ ಈ ರೀತಿ ವರ್ತನೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಕ್ರಮಕ್ಕೆ ಸೂಚನೆ ನೀಡಿದ್ದಾರೆ. ಈ ಘಟನೆ ಪೊಲೀಸ್ ಇಲಾಖೆಗೆ ಮುಜುಗರ ತಂದಿದ್ದು, ರಾಮಚಂದ್ರರಾವ್ 10 ದಿನ ರಜೆ ಹಾಕಿ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular