ಧರ್ಮಸ್ಥಳ ವ್ಯಾಪ್ತಿಯಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದೆ ಎಂದು ಹೇಳಿಕೊಂಡಿದ್ದ ಮಾಸ್ಕ್ ಮ್ಯಾನ್ ನನ್ನು ಎಸ್ಐಟಿ ಬಂಧಿಸಿದೆ.
ಮಾಸ್ಕ್ ಮ್ಯಾನ್ ನೀಡಿದ ದೂರು ಮಾಹಿತಿ ಆಧರಿಸಿ ಧರ್ಮಸ್ಥಳ ವ್ಯಾಪ್ತಿಯಲ್ಲಿ ಗುಂಡಿಗಳನ್ನು ತೆಗೆದು ಶೋಧ ಕಾರ್ಯ ಕೈಗೊಳ್ಳಲಾಗಿತ್ತು. ಮಾಸ್ಕ್ ಮ್ಯಾನ್ ಅನ್ನು ತೀವ್ರವಾಗಿ ವಿಚಾರಣೆಗೆ ಒಳಪಡಿಸಿದ ಎಸ್ಐಟಿ ಅಧಿಕಾರಿಗಳು ಆತನನ್ನು ಬಂಧಿಸಿದ್ದಾರೆ.
ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಸುಧೀರ್ಘ 19 ಗಂಟೆಗಳ ವಿಚಾರಣೆಯ ಬಳಿಕ ಆತನನ್ನು ಬಂಧಿಸಿದ್ದಾರೆ.
ನಿನ್ನೆ ಬೆಳಿಗ್ಗೆ 10.30 ರಿಂದ ದೂರುದಾರನ ಇಂದು ಬೆಳಗಿನ ಜಾವ 5 ಗಂಟೆಯವರೆಗೂ ವಿಚಾರಣೆ ನಡೆಸಿದ್ದರು. ನಿನ್ನೆ ಮಧ್ಯಾಹ್ನ 2 ಗಂಟೆಯಿಂದ ಎಸ್ಐಟಿ ಮುಖ್ಯಸ್ಥ ಪ್ರಣವ್ ಮಹಾಂತಿ ವಿಚಾರಣೆ ನಡೆಸಿದ್ದು, ಸುದೀರ್ಘ ವಿಚಾರಣೆಯ ನಂತರ ಆತನನ್ನು ಬಂಧಿಸಲಾಗಿದೆ.