ಬೆಂಗಳೂರು: ರಾಜ್ಯದಲ್ಲಿ ಇಂದು ಐವರಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ. ಬೆಂಗಳೂರಿನಲ್ಲಿ ಕೊರೋನಾ ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದಾರೆ.
ಬೆಂಗಳೂರಿನಲ್ಲಿ ಕೊರೊನಾ ಸೋಂಕಿಗೆ ಮೊದಲ ಬಲಿಯಾಗಿದೆ. ಕೋವಿಡ್ ನಿಂದಾಗಿ ವೈಟ್ಫೀಲ್ಡ್ ಮೂಲದ 85 ವರ್ಷದ ವೃದ್ಧ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 38 ಸಕ್ರಿಯ ಪ್ರಕರಣಗಳು ಇವೆ. ಬೆಂಗಳೂರಿನಲ್ಲಿ 32 ಸಕ್ರಿಯ ಪ್ರಕರಣಗಳು ಇವೆ. ವಿಜಯನಗರ 1, ಮೈಸೂರು 2, ಬೆಂಗಳೂರಿನಲ್ಲಿ 2 ಕೇಸ್ ಗಳು ಪತ್ತೆಯಾಗಿವೆ ಎಂದು ಆರೋಗ್ಯ ಇಲಾಖೆಯಿಂದ ಕೋವಿಡ್ ಬುಲೆಟಿನ್ ಬಿಡುಗಡೆ ಮಾಡಲಾಗಿದೆ.