HomeIndiaಜಮ್ಮು ಕಾಶ್ಮೀರ ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಸೇರ್ಪಡೆ ವದಂತಿ ನಿರಾಕರಿಸಿದ ಮಾಜಿ ಸಿಎಂ ಗುಲಾಂ ನಬಿ...

ಜಮ್ಮು ಕಾಶ್ಮೀರ ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಸೇರ್ಪಡೆ ವದಂತಿ ನಿರಾಕರಿಸಿದ ಮಾಜಿ ಸಿಎಂ ಗುಲಾಂ ನಬಿ ಆಜಾದ್

ನವದೆಹಲಿ: ವಿಧಾನಸಭೆ ಚುನಾವಣೆಗೆ ಮುನ್ನ ಜಮ್ಮು ಮತ್ತು ಕಾಶ್ಮೀರದಲ್ಲಿ ರಾಜಕೀಯ ಚಟುವಟಿಕೆ ತೀವ್ರಗೊಂಡಿದೆ.

ಕಾಂಗ್ರೆಸ್ ಸೇರುವ ವರದಿಯನ್ನು ಗುಲಾಂ ನಬಿ ಆಜಾದ್ ಪಕ್ಷ ನಿರಾಕರಿಸಿದೆ. ಮಾಜಿ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಅವರು ಪಕ್ಷಕ್ಕೆ ಮರಳಿ ಸೇರ್ಪಡೆಗೊಳ್ಳುವ ಬಗ್ಗೆ ಊಹಾಪೋಹಗಳಿವೆ.

ಆದರೆ, ಈ ವದಂತಿಗಳನ್ನು ಆಜಾದ್ ದೃಢವಾಗಿ ನಿರಾಕರಿಸಿದ್ದಾರೆ. ಕಾಂಗ್ರೆಸ್ ತೊರೆದ ನಂತರ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಾರ್ಟಿ(ಡಿಪಿಎಪಿ) ಸ್ಥಾಪಿಸಿದ ಆಜಾದ್ ಕಾಂಗ್ರೆಸ್‌ಗೆ ಮರಳುವ ಯಾವುದೇ ಯೋಜನೆ ಇಲ್ಲ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಡಿಪಿಎಪಿಯ ಮುಖ್ಯ ವಕ್ತಾರ ಸಲ್ಮಾನ್ ನಿಜಾಮಿ ಪ್ರಕಾರ, ಆಜಾದ್ ನಿರ್ಗಮಿಸಿದ ನಂತರ ಯಾವುದೇ ಕಾಂಗ್ರೆಸ್ ನಾಯಕರು ಅವರನ್ನು ಭೇಟಿಯಾಗಿಲ್ಲ. ಆಜಾದ್ ಕೂಡ ಯಾವುದೇ ಕಾಂಗ್ರೆಸ್ ಪದಾಧಿಕಾರಿಗಳನ್ನು ಸಂಪರ್ಕಿಸಿಲ್ಲ. ಸಂಭಾವ್ಯ ಮರು ಸೇರ್ಪಡೆಯ ಕುರಿತು ಇತ್ತೀಚಿನ ವದಂತಿಗಳು ಆಧಾರ ರಹಿತವಾಗಿವೆ ಎಂದು ನಿಜಾಮಿ ಸ್ಪಷ್ಟಪಡಿಸಿದ್ದಾರೆ,

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular