ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಕೆ.ಆರ್.ಎಸ್. ಅಣೆಕಟ್ಟು ನಿರ್ಮಾಣ ಮಾಡಲು ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ. ಮಹದೇವಪ್ಪ ಹೇಳಿದ್ದಾರೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಸಚಿವ ಮಹದೇವಪ್ಪ, ಕನ್ನಂಬಾಡಿ ಅಣೆಕಟ್ಟು ನಿರ್ಮಿಸಲು ಟಿಪ್ಪುಸುಲ್ತಾನ್ ಅಡಿಗಲ್ಲು ಹಾಕಿದ್ದರು. ಈ ವಿಷಯವನ್ನು ಹೇಳಲು ಯಾರಿಗೂ ಧೈರ್ಯವಿಲ್ಲ. ಕೆಆರ್‌ಎಸ್ ಗೇಟ್ ನಲ್ಲಿ ಈಗಲೂ ಟಿಪ್ಪು ಸುಲ್ತಾನ್ ಅವರು ಅಣೆಕಟ್ಟೆಗೆ ಅಡಿಗಲ್ಲು ಹಾಕಿರುವುದನ್ನು ಕಾಣಬಹುದು ಎಂದು ಮೈಸೂರು ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪುಣ್ಯತಿಥಿಯ ದಿನವೇ ಸಚಿವರು ಹೇಳಿಕೆ ನೀಡಿದ್ದಾರೆ.
ಅಲ್ಲದೇ, ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಅವರು ಈ ಕುರಿತಾಗಿ ಸಾಕ್ಷ್ಯವನ್ನೂ ಒದಗಿಸಿದ್ದಾರೆ.
“ಈ ವಿವರಣೆಯು ಈಗಲೂ KRS ನಲ್ಲೇ ಇದೆ.
ಸುಮ್ಮನೇ ಧರ್ಮದ ಕಾರಣಕ್ಕಾಗಿ ರಾಜಕೀಯ ಮಾಡುವ ಬದಲು ಕನ್ನಡವನ್ನು ಓದುವುದನ್ನು ಕಲಿಯಿರಿ ಮತ್ತು ಪದಗಳನ್ನು ಅರ್ಥ ಮಾಡಿಕೊಳ್ಳುವುದನ್ನು ಕಲಿಯಿರಿ” ಎಂದು ಮಹದೇವಪ್ಪ ತಿಳಿಸಿದ್ದಾರೆ.

ಮಾನ್ಯ @CTRavi_BJP ಅವರೇ
— Dr H C Mahadevappa(Buddha Basava Ambedkar Parivar) (@CMahadevappa) August 3, 2025
ಈ ವಿವರಣೆಯು ಈಗಲೂ KRS ನಲ್ಲೇ ಇದೆ.
ಸುಮ್ಮನೇ ಧರ್ಮದ ಕಾರಣಕ್ಕಾಗಿ ರಾಜಕೀಯ ಮಾಡುವ ಬದಲು ಕನ್ನಡವನ್ನು ಓದುವುದನ್ನು ಕಲಿಯಿರಿ ಮತ್ತು ಪದಗಳನ್ನು ಅರ್ಥ ಮಾಡಿಕೊಳ್ಳುವುದನ್ನು ಕಲಿಯಿರಿ https://t.co/8tMALUy6Q6 pic.twitter.com/vPAXmNr81d