HomeLatest NewsBREAKING NEWS: ಕಾರ್ ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬಿಳಗಿ ಸೇರಿ ಮೂವರು ಸಾವು |...

BREAKING NEWS: ಕಾರ್ ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬಿಳಗಿ ಸೇರಿ ಮೂವರು ಸಾವು | Mahantesh Bilagi dies in car accident

ಕಲಬುರಗಿ: ಹಿರಿಯ ಐಎಎಸ್ ಅಧಿಕಾರಿ, ಖನಿಜ ನಿಗಮದ ಎಂಡಿ ಮಹಾಂತೇಶ್ ಬಿಳಗಿ ಪ್ರಯಾಣಿಸುತ್ತಿದ್ದ ಕಾರ್ ಅಪಘಾತಕ್ಕೀಡಾಗಿದೆ. ಅಪಘಾತದಲ್ಲಿ ಮಹಾಂತೇಶ್ ಬಿಳಗಿ ಸೇರಿ ಮೂವರು ಮೃತಪಟ್ಟಿದ್ದಾರೆ.

ಕಲಬುರಗಿ ಜಿಲ್ಲೆ ಜೇವರ್ಗಿ ಬೈಪಾಸ್ ಬಳಿ ಅವರು ಇನೋವಾ ಕಾರ್ ಅಪಘಾತಕ್ಕೀಡಾಗಿದೆ. ಮಹಾಂತೇಶ್ ಬಿಳಗಿ ಪ್ರಯಾಣಿಸುತ್ತಿದ್ದ ಕಾರ್ ನಲ್ಲಿದ್ದ ಐದು ಜನರ ಪೈಕಿ ಮೂವರು ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಕಲಬುರಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಜಯಪುರದಿಂದ ಕಲಬುರಗಿಗೆ ಪ್ರಯಾಣಿಸುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಐಎಎಸ್ ಅಧಿಕಾರಿಯ ಮಹಾಂತೇಶ್ ಬಿಳಗಿ ಸೇರಿದಂತೆ ಕಾರ್ ನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ. ಜೇವರ್ಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬೆಳಗಾವಿ, ದಾವಣಗೆರೆಯಲ್ಲಿ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ಅವರು ಜನಾನುರಾಗಿಯಾಗಿದ್ದರು. ಬೆಸ್ಕಾಂ ಎಂಡಿಯಾಗಿ ಕಾರ್ಯ ನಿರ್ವಹಿಸಿದ್ದರು. ಖನಿಜ ನಿಗಮದ ಎಂಡಿಯಾಗಿದ್ದರು. ಸಂಬಂಧಿಕರ ಮದುವೆಗಾಗಿ ಕಲಬುರಗಿಗೆ ತೆರಳುತ್ತಿದ್ದಾಗ ಕಾರ್ ಅಪಘಾತಕ್ಕೀಡಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular