ಚಿಕ್ಕಮಗಳೂರು: ಮುಳ್ಳಯ್ಯನಗಿರಿ ತಿರುವಿನಲ್ಲಿ ಪ್ರವಾಸಿಗರಿದ್ದ ಜೀಪ್ ಪಲ್ಟಿಯಾಗಿದೆ. ಅಪಘಾತದಲ್ಲಿ 7 ಜನ ಪ್ರವಾಸಿಗರಿಗೆ ಗಂಭೀರ ಗಾಯಗಳಾಗಿವೆ.
ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿಯಲ್ಲಿ ಘಟನೆ ನಡೆದಿದೆ. ಬಾಬಾ ಬುಡನ್ ಸ್ವಾಮಿ ದರ್ಗಾಗೆ 7 ಜನ ಪ್ರವಾಸಿಗರು ಪುತ್ತೂರಿನಿಂದ ಜೀಪ್ ನಲ್ಲಿ ಬಂದಿದ್ದರು. ತಿರುವುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಜೀಪ್ ಪಲ್ಟಿಯಾಗಿದೆ. ಗಾಯಾಳುಗಳನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಚಿಕ್ಕಮಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

