HomeLatest NewsBREAKING NEWS: ಇಡಿ ಅಧಿಕಾರಿಗಳಿಂದ ಕಾರವಾರ ಶಾಸಕ ಸತೀಶ್ ಸೈಲ್ ಅರೆಸ್ಟ್

BREAKING NEWS: ಇಡಿ ಅಧಿಕಾರಿಗಳಿಂದ ಕಾರವಾರ ಶಾಸಕ ಸತೀಶ್ ಸೈಲ್ ಅರೆಸ್ಟ್

ಬೆಂಗಳೂರು: ಕಾರವಾರ ಶಾಸಕ ಸತೀಶ್ ಸೈಲ್ ಅವರನ್ನು ಬಂಧಿಸಲಾಗಿದೆ. ಇಡಿ ಅಧಿಕಾರಿಗಳು ಸತೀಶ್ ಸೈಲ್ ಅವರನ್ನು ಬಂಧಿಸಿದ್ದಾರೆ.

ಇಡಿ ವಿಚಾರಣೆಗೆ ಆಗಮಿಸಿದ ಹಿನ್ನೆಲೆಯಲ್ಲಿ ಕಾರವಾರದಲ್ಲಿ ಸತೀಶ್ ಸೈಲ್ ಅವರನ್ನು ಬಂಧಿಸಲಾಗಿದೆ.

ಅಕ್ರಮ ಅದಿರು ಸಾಗಾಟ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ನಗದು ಸೇರಿದಂತೆ 14.13 ಕೋಟಿ ರೂಪಾಯಿ ಮೌಲ್ಯದ ಚಿನ್ನವನ್ನು ಜಪ್ತಿ ಮಾಡಲಾಗಿತ್ತು. ಆಗಸ್ಟ್ 13, 14ರಂದು ಇಡಿ ಅಧಿಕಾರಿಗಳು ದಾಳಿ ಮಾಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾರವಾರ, ಗೋವಾ, ಮುಂಬೈ, ದೆಹಲಿಯಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ಪ್ರಕರಣದ ವಿಚಾರಣೆಗೆ ಆಗಮಿಸದ ಹಿನ್ನೆಲೆಯಲ್ಲಿ ಶಾಸಕ ಸತೀಶ್ ಸೈಲ್ ಅವರನ್ನು ಬಂಧಿಸಲಾಗಿದೆ. ನ್ಯಾಯಾಧೀಶರ ಮುಂದೆ ಅವರನ್ನು ಹಾಜರುಪಡಿಸಲಾಗುವುದು. ಕೋಗಿಲು ಕ್ರಾಸ್ ನಲ್ಲಿರುವ ಮನೆಯಲ್ಲಿ ನ್ಯಾಯಾಧೀಶರ ಮುಂದೆ ಇಡಿ ಅಧಿಕಾರಿಗಳು ಹಾಜರುಪಡಿಸಲಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular