ಚಾಮರಾಜನಗರ: ಲೈನ್ ದುರಸ್ತಿಯ ವೇಳೆ ಸಿಡಿಲು ಬಡಿದು ವಿದ್ಯುತ್ ಪ್ರವಹಿಸಿ ಕಂಬದಲ್ಲಿದ್ದ ಲೈನ್ ಮನ್ ಸಾವನ್ನಪ್ಪಿದ್ದಾರೆ.
ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ರಾಮಾಪುರ ಸಮೀಪದ ಜಲ್ಲಿಪಾಳ್ಯ ಬಳಿ ಘಟನೆ ನಡೆದಿದೆ. ವಿದ್ಯುತ್ ಕಡಿತಗೊಳಿಸಿ ಲೈನ್ ದುರಸ್ತಿ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ವಿದ್ಯುತ್ ತಂತಿಗೆ ಪವರ್ ಸಪ್ಲೈ ಆಗಿದೆ. ವಿದ್ಯುತ್ ಪ್ರವಹಿಸಿ ಕಂಬದಲ್ಲಿದ್ದ ರಾಹುಲ್ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ರಾಮಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.