HomeLatest NewsBREAKING NEWS: ಬೆಂಗಳೂರು ಕಾಲ್ತುಳಿತ ಪ್ರಕರಣ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶ: ಮೃತರ ಕುಟುಂಬಕ್ಕೆ 10 ಲಕ್ಷ...

BREAKING NEWS: ಬೆಂಗಳೂರು ಕಾಲ್ತುಳಿತ ಪ್ರಕರಣ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶ: ಮೃತರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಘೋಷಿಸಿದ ಸಿದ್ಧರಾಮಯ್ಯ

ಬೆಂಗಳೂರು: ಕಾಲ್ತುಳಿತ ದುರಂತದಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ. ಮೃತರ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಗ್ಗೆ ಮಾಹಿತಿ ನೀಡಿದ್ದು, ಕಾಲ್ತುಳಿತದಲ್ಲಿ ಮೃತಪಟ್ಟ 11 ಮಂದಿ ಕುಟುಂಬಕ್ಕೆ ತಲಾ 10 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ ಉಚಿತ ಚಿಕಿತ್ಸೆ ನೀಡಲಿದ್ದು, ಚಿಕಿತ್ಸೆ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಹೇಳಿದ್ದಾರೆ.

ಘಟನೆಯ ಬಗ್ಗೆ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶ ನೀಡಲಾಗಿದೆ. 33 ಮಂದಿ ಗಾಯಗೊಂಡಿದ್ದು, ಎರಡು ಆಸ್ಪತ್ರೆಗಳಿಗೆ ಭೇಟಿ ನೀಡಿದ್ದೇನೆ. ಘಟನೆ ನಡೆಯಬಾರದಿತ್ತು. ಘಟನೆಗೆ ಸರ್ಕಾರ ದುಃಖ ವ್ಯಕ್ತಪಡಿಸುತ್ತದೆ. ನಮ್ಮ ನಿರೀಕ್ಷೆಗೂ ಮೀರಿ ಜನ ಸೇರಿದ್ದರು. ವಿಧಾನಸೌಧದ ಎದುರು ಒಂದೂವರೆ ಲಕ್ಷಕ್ಕೂ ಅಧಿಕ ಮಂದಿ ಸೇರಿದ್ದರು. ಯಾರೂ ಇದನ್ನು ನಿರೀಕ್ಷಿಸಲಿಲ್ಲ. ಸ್ಟೇಡಿಯಂ ಬಳಿ ಸುಮಾರು 3 ಲಕ್ಷ ಜನ ಸೇರಿದ್ದರು. ಇಷ್ಟೊಂದು ಜನ ಸೇರುವ ನಿರೀಕ್ಷೆ ಇರಲಿಲ್ಲ ಎಂದು ಸಿದ್ದರಾಮಯ್ಯ ತಿಳಿಸಿದ್ದು, ಘಟನೆಯ ಬಗ್ಗೆ ಮ್ಯಾಜಿಕ್ರೇಟ್ ತನಿಖೆಗೆ ಆದೇಶ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾನು ಈ ಘಟನೆಯನ್ನು ಸಮರ್ಥಿಸಿಕೊಳ್ಳಲು ಬಯಸುವುದಿಲ್ಲ. ನಮ್ಮ ಸರ್ಕಾರ ಇದರ ಬಗ್ಗೆ ರಾಜಕೀಯ ಮಾಡುವುದಿಲ್ಲ. ನಾನು ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶಿಸಿದ್ದೇನೆ ಮತ್ತು 15 ದಿನಗಳ ಕಾಲಾವಕಾಶ ನೀಡಿದ್ದೇನೆ. ಜನರು ಕ್ರೀಡಾಂಗಣದ ಗೇಟ್‌ಗಳನ್ನು ಸಹ ಒಡೆದರು. ಕಾಲ್ತುಳಿತ ಸಂಭವಿಸಿದೆ. ಇಷ್ಟೊಂದು ದೊಡ್ಡ ಜನಸಂದಣಿಯನ್ನು ಯಾರೂ ನಿರೀಕ್ಷಿಸಿರಲಿಲ್ಲ. ಕ್ರೀಡಾಂಗಣವು ಕೇವಲ 35,000 ಜನರ ಸಾಮರ್ಥ್ಯವನ್ನು ಹೊಂದಿದೆ, ಆದರೆ 2-3 ಲಕ್ಷ ಜನರು ಬಂದರು ಎಂದು ಸಿಎಂ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular