HomeLatest NewsBREAKING NEWS: ದಸರಾ ವೇಳೆಗೆ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಫಿಕ್ಸ್: ಮಾಜಿ ಸಚಿವ ಶ್ರೀರಾಮುಲು ಹೊಸ...

BREAKING NEWS: ದಸರಾ ವೇಳೆಗೆ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಫಿಕ್ಸ್: ಮಾಜಿ ಸಚಿವ ಶ್ರೀರಾಮುಲು ಹೊಸ ಬಾಂಬ್

ಬಾಗಲಕೋಟೆ: ದಸರಾ ವೇಳೆಗೆ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಫಿಕ್ಸ್ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೊಸ ಬಾಂಬ್ ಸಿಡಿಸಿದ್ದಾರೆ.

ಬಾಗಲಕೋಟೆ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಯಾವುದೇ ಕ್ಷಣದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ. ನೂರಕ್ಕೆ ನೂರರಷ್ಟು ಸರ್ಕಾರ ಪತನವಾಗುತ್ತದೆ ಎಂದು ಭವಿಷ್ಯ ನುಡಿದಿದ್ದಾರೆ.

ಈ ಹಿಂದೆ ಕಾಂಗ್ರೆಸ್ ಸರ್ಕಾರ ಇದ್ದಾಗ ಕಾಂಗ್ರೆಸ್ ನವರೇ ಸರ್ಕಾರ ಕೆಡವಿದ್ದರು. ರಾಜ್ಯದಲ್ಲಿ ಈಗಲೂ ಕಾಂಗ್ರೆಸ್ ನಾಯಕರಿಂದಲೇ ಸರ್ಕಾರ ಬೀಳುತ್ತದೆ. ಅಧಿಕಾರ ಹಸ್ತಾಂತರ ವಿಷಯದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ. ಹೀಗಾಗಿ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಬರಲಿದೆ ಎಂದು ಶ್ರೀರಾಮುಲು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಚಿವ ಕೆ.ಎನ್. ರಾಜಣ್ಣ ಕೂಡ ರಾಜ್ಯದಲ್ಲಿ ಕ್ರಾಂತಿಯಾಗಲಿದೆ ಎಂದು ಹೇಳಿದ್ದಾರೆ. ಸಚಿವ ರಾಜಣ್ಣ ಅವರ ಮಾತು ಕೇಳಿದರೆ ಸರ್ಕಾರ ಪತನವಾಗಲಿದೆ. ರಾಜ್ಯದಲ್ಲಿ ನಾವು ಮತ್ತೆ ಬಿಜೆಪಿ ಬಾವುಟ ಹಾರಿಸುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular