ಬೆಂಗಳೂರು: ಸಿಎಂ ಪತ್ನಿ ಪಾರ್ವತಿ ಅವರಿಗೆ ಆಕ್ರಮವಾಗಿ ಮುಡಾ ನಿವೇಶನ ಹಂಚಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಆಪ್ತ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಕೆ. ಮರಿಗೌಡ ಅಕ್ರಮವಾಗಿ ನಿವೇಶನ ಪಡೆದಿರುವುದು ಬೆಳಕಿಗೆ ಬಂದಿದೆ.
ಮರಿಗೌಡರಿಗೆ ಸೇರಿದ 10 ಸ್ಥಿರಾಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಮುಡಾದಿಂದ ಅಕ್ರಮವಾಗಿ ಪಡೆದಿದ್ದ ಆರು ನಿವೇಶನಗಳು, ಮೂರು ಸ್ಥಿರಾಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. 20.85 ಮೌಲ್ಯದ ಒಂದು ವಾಣಿಜ್ಯ ಕಟ್ಟಡ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.
ಇಡಿ ದಾಳಿಯ ವೇಳೆ ಸೈಟ್ ಹಂಚಿಕೆಯಲ್ಲಿ ನಿಯಮ ಉಲ್ಲಂಘನೆ ಪತ್ತೆಯಾಗಿತ್ತು. ಕೆ. ಮರಿಗೌಡ ಅವರಿಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಿಂದಿನ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ನೆರವಾಗಿದ್ದರು. ಅವರ ನೆರವಿನಿಂದ ಮರಿಗೌಡ ಅಕ್ರಮವಾಗಿ ನಿವೇಶನ ಪಡೆದುಕೊಂಡಿದ್ದರು.
ಇಡಿ ಅಧಿಕಾರಿಗಳ ಮುಂದೆ ಮರಿಗೌಡ ಈ ಹಿಂದೆ ವಿಚಾರಣೆಗೆ ಹಾಜರಾಗಿದ್ದರು. 283 ನಿವೇಶನ, 3 ವೈಯಕ್ತಿಕ ಆಸ್ತಿ ತಾತ್ಕಾಲಿಕ ಮುಟ್ಟುಗೋಲು ಹಾಕಿಕೊಂಡಿದ್ದು, ಪ್ರಕರಣದಲ್ಲಿ ಇದುವರೆಗೆ 460 ಕೋಟಿ ರೂಪಾಯಿ ಮೌಲ್ಯದ ಆಸ್ತಿಪಾಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.

