ಶಿವಮೊಗ್ಗ: ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮಾರುಕಟ್ಟೆ ಸಮೀಪ ಯುವಕನನ್ನು ಕೊಲೆ ಮಾಡಲಾಗಿದೆ.
26 ವರ್ಷದ ಅರುಣ್ ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಕೌಟುಂಬಿಕ ಕಲಹದ ಕಾರಣಕ್ಕೆ ಆತನ ಸಂಬಂಧಿಕರೇ ಈ ಕೃತ್ಯ ಎಸಗಿದ್ದಾರೆಂದು ಶಂಕಿಸಲಾಗಿದೆ.
ವೈವಾಹಿಕ ವಿವಾದವೇ ಕೊಲೆಗೆ ಕಾರಣವೆಂದು ಶಂಕಿಸಲಾಗಿದ್ದು, ಇಬ್ಬರು ಆರೋಪಿಗಳನ್ನು ಗುರುತಿಸಲಾಗಿದೆ. ಎಸ್ಪಿ ಮಿಥುನ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

