ಬೆಂಗಳೂರು: ಶಿವಮೊಗ್ಗದ ಟ್ರಯಲ್ ಬ್ಲಾಸ್ಟ್ ಪ್ರಕರಣದಲ್ಲಿ ಅರಾಫತ್ ಗೆ ಆರು ವರ್ಷ ಜೈಲು ಶಿಕ್ಷೆ ವಿಧಿಸಿ ಬೆಂಗಳೂರಿನ ಎನ್ಐಎ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.
ಟ್ರಯಲ್ ಬ್ಲಾಸ್ಟ್ ಪ್ರಕರಣದಲ್ಲಿ ಅರಾಫತ್ ಮೂರನೇ ಆರೋಪಿಯಾಗಿದ್ದಾನೆ. ಈಗಾಗಲೇ ಇಬ್ಬರು ಅಪರಾಧಿಗಳಿಗೆ ತಲಾ 6 ವರ್ಷ ಶಿಕ್ಷೆ ವಿಧಿಸಲಾಗಿದೆ. ಟ್ರಯಲ್ ಬ್ಲಾಸ್ಟ್ ಪ್ರಕರಣದಲ್ಲಿ ಎನ್ಐಎ 12 ಆರೋಪಿಗಳನ್ನು ಬಂಧಿಸಿದ್ದು, ಇದುವರೆಗೆ ಮೂವರು ಅಪರಾಧಿಗಳಿಗೆ ಎನ್ಐಎ ಕೋರ್ಟ್ ನಿಂದ ಶಿಕ್ಷೆ ಪ್ರಕಟಿಸಲಾಗಿದೆ. 9 ಆರೋಪಿಗಳ ವಿಚಾರಣೆಯನ್ನು ಎನ್ಐಎ ವಿಶೇಷ ನ್ಯಾಯಾಲಯ ಮುಂದುವರೆಸಿದೆ.
ಐಸಿಸ್ ಉಗ್ರ ಸಂಘಟನೆಯ ಜೊತೆಗೆ ನಿರಂತರವಾಗಿ ಸಂಪರ್ಕದಲ್ಲಿದ್ದ ಮತ್ತು ಉಗ್ರ ಚಟುವಟಿಕೆಗೆ ಹಣ ಸಂಗ್ರಹ ಹಾಗೂ ಯುವಕರನ್ನು ಒಗ್ಗೂಡಿಸಿದ ಆರೋಪ ಅರಾಫತ್ ಮೇಲಿದ್ದು, ಈ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರು ವರ್ಷ ಶಿಕ್ಷೆ ಪ್ರಕಟಿಸಲಾಗಿದೆ.

