ವಿಜಯಪುರ: ಬ್ಯಾಂಕ್ ಮ್ಯಾನೇಜರ್ ಮತ್ತು ಸಿಬ್ಬಂದಿಯ ಕೈಕಾಲು ಕಟ್ಟಿ ಹಾಕಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ದರೋಡೆ ನಡೆಸಲಾಗಿದೆ.
ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದಲ್ಲಿ ಘಟನೆ ನಡೆದಿದೆ. ಮ್ಯಾನೇಜರ್ ಮತ್ತು ಸಿಬ್ಬಂದಿಯನ್ನು ಕೂಡಿ ಹಾಕಿ ದರೋಡೆ ನಡೆಸಲಾಗಿದೆ. ಅಪಾರ ನಗದು, ಚಿನ್ನವನ್ನು ದೋಚಿ ಗ್ಯಾಂಗ್ ಪರಾರಿಯಾಗಿದೆ.
ಪಿಸ್ತೂಲು ಮಾರಕಾಸ್ತ್ರಗಳೊಂದಿಗೆ ಮುಖಕ್ಕೆ ಮುಸುಕು ಧರಿಸಿ ಬಂದಿದ್ದ ದರೋಡೆಕೋರರು ಬ್ಯಾಂಕ್ ಅಧಿಕಾರಿಗಳು, ಸಿಬ್ಬಂದಿಯನ್ನು ಬೆದರಿಸಿ ಕಟ್ಟಿಹಾಕಿ ದರೋಡೆ ನಡೆಸಿದ್ದಾರೆ. ಸ್ಥಳಕ್ಕೆ ಎಸ್ಪಿ ಲಕ್ಷ್ಮಣ ನಿಂಬರಗಿ ಮತ್ತು ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಡಚಣ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.,