HomeLatest NewsBREAKING NEWS: ವಿಜಯಪುರದಲ್ಲಿ ಆಘಾತಕಾರಿ ಘಟನೆ: SBI ಬ್ಯಾಂಕ್ ಮ್ಯಾನೇಜರ್, ಸಿಬ್ಬಂದಿ ಕಟ್ಟಿ ಹಾಕಿ ಅಪಾರ...

BREAKING NEWS: ವಿಜಯಪುರದಲ್ಲಿ ಆಘಾತಕಾರಿ ಘಟನೆ: SBI ಬ್ಯಾಂಕ್ ಮ್ಯಾನೇಜರ್, ಸಿಬ್ಬಂದಿ ಕಟ್ಟಿ ಹಾಕಿ ಅಪಾರ ನಗದು, ಚಿನ್ನ ದರೋಡೆ

ವಿಜಯಪುರ: ಬ್ಯಾಂಕ್ ಮ್ಯಾನೇಜರ್ ಮತ್ತು ಸಿಬ್ಬಂದಿಯ ಕೈಕಾಲು ಕಟ್ಟಿ ಹಾಕಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ದರೋಡೆ ನಡೆಸಲಾಗಿದೆ.

ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದಲ್ಲಿ ಘಟನೆ ನಡೆದಿದೆ. ಮ್ಯಾನೇಜರ್ ಮತ್ತು ಸಿಬ್ಬಂದಿಯನ್ನು ಕೂಡಿ ಹಾಕಿ ದರೋಡೆ ನಡೆಸಲಾಗಿದೆ. ಅಪಾರ ನಗದು, ಚಿನ್ನವನ್ನು ದೋಚಿ ಗ್ಯಾಂಗ್ ಪರಾರಿಯಾಗಿದೆ.

ಪಿಸ್ತೂಲು ಮಾರಕಾಸ್ತ್ರಗಳೊಂದಿಗೆ ಮುಖಕ್ಕೆ ಮುಸುಕು ಧರಿಸಿ ಬಂದಿದ್ದ ದರೋಡೆಕೋರರು ಬ್ಯಾಂಕ್ ಅಧಿಕಾರಿಗಳು, ಸಿಬ್ಬಂದಿಯನ್ನು ಬೆದರಿಸಿ ಕಟ್ಟಿಹಾಕಿ ದರೋಡೆ ನಡೆಸಿದ್ದಾರೆ. ಸ್ಥಳಕ್ಕೆ ಎಸ್ಪಿ ಲಕ್ಷ್ಮಣ ನಿಂಬರಗಿ ಮತ್ತು ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಡಚಣ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.,

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular