ಬೆಂಗಳೂರು: ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ರಾಜ್ಯ ಶಿಕ್ಷಣ ನೀತಿ(SEP) ಆಯೋಗದ ಅಧ್ಯಕ್ಷ ಪ್ರೊ. ಸುಖದೇವ್ ತೋರಟ್ ಅವರ ಆಯೋಗ ಸಿದ್ಧಪಡಿಸಿದ ಅಂತಿಮ ವರದಿ ಸಲ್ಲಿಸಲಾಯಿತು.
ಬಳಿಕ ಆಯೋಗದಲ್ಲಿ ತಿಳಿಸಿರುವಂತೆ ವಿದ್ಯಾರ್ಥಿಗಳಲ್ಲಿ ಅಗತ್ಯವಾಗಿ ಬೇಕಾಗಿರುವ ವೈಜ್ಞಾನಿಕತೆ ಮತ್ತು ವೈಚಾರಿಕತೆ ಬೆಳೆಸುವ ಅವರ ಮನೋವಿಕಾಸಕ್ಕೆ ಅಗತ್ಯವಾದ ಶಿಕ್ಷಣ ನೀಡಲು ಸೂಕ್ತ ಶಿಫಾರಸ್ಸುಗಳ ಕುರಿತು ಸಮಗ್ರವಾಗಿ ಚರ್ಚಿಸಲಾಯಿತು.
ಈ ವೇಳೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಎಸ್, ಮಧುಬಂಗಾರಪ್ಪ, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್, ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಸಿಎಂ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ, ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಮತ್ತು ಇತರ ಅಧಿಕಾರಿಗಳು ಉಪಸ್ಥಿತರಿದ್ದರು.