HomeLatest NewsBREAKING NEWS: ಸಿಎಂಗೆ ರಾಜ್ಯ ಶಿಕ್ಷಣ ನೀತಿ ಆಯೋಗದಿಂದ ಅಂತಿಮ ವರದಿ ಸಲ್ಲಿಕೆ: ಮನೋವಿಕಾಸಕ್ಕೆ ಅಗತ್ಯ...

BREAKING NEWS: ಸಿಎಂಗೆ ರಾಜ್ಯ ಶಿಕ್ಷಣ ನೀತಿ ಆಯೋಗದಿಂದ ಅಂತಿಮ ವರದಿ ಸಲ್ಲಿಕೆ: ಮನೋವಿಕಾಸಕ್ಕೆ ಅಗತ್ಯ ಶಿಕ್ಷಣ ನೀಡುವ ಬಗ್ಗೆ ಚರ್ಚೆ

ಬೆಂಗಳೂರು: ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ರಾಜ್ಯ ಶಿಕ್ಷಣ ನೀತಿ(SEP) ಆಯೋಗದ ಅಧ್ಯಕ್ಷ ಪ್ರೊ. ಸುಖದೇವ್ ತೋರಟ್ ಅವರ ಆಯೋಗ ಸಿದ್ಧಪಡಿಸಿದ ಅಂತಿಮ ವರದಿ ಸಲ್ಲಿಸಲಾಯಿತು.

ಬಳಿಕ ಆಯೋಗದಲ್ಲಿ ತಿಳಿಸಿರುವಂತೆ ವಿದ್ಯಾರ್ಥಿಗಳಲ್ಲಿ ಅಗತ್ಯವಾಗಿ ಬೇಕಾಗಿರುವ ವೈಜ್ಞಾನಿಕತೆ ಮತ್ತು ವೈಚಾರಿಕತೆ ಬೆಳೆಸುವ ಅವರ ಮನೋವಿಕಾಸಕ್ಕೆ ಅಗತ್ಯವಾದ ಶಿಕ್ಷಣ ನೀಡಲು ಸೂಕ್ತ ಶಿಫಾರಸ್ಸುಗಳ ಕುರಿತು ಸಮಗ್ರವಾಗಿ ಚರ್ಚಿಸಲಾಯಿತು.

ಈ ವೇಳೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಎಸ್,  ಮಧುಬಂಗಾರಪ್ಪ, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್, ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಸಿಎಂ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ, ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಮತ್ತು ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular