HomeLatest NewsBREAKING NEWS: ರಾಜ್ಯದಲ್ಲಿ ಸಮೀಕ್ಷೆ ಹಿನ್ನೆಲೆ ಶಾಲೆಗಳ ಅವಧಿ ಬದಲಾವಣೆ: ಸಮೀಕ್ಷೆ ಕಾರ್ಯ ವಿಸ್ತರಣೆ

BREAKING NEWS: ರಾಜ್ಯದಲ್ಲಿ ಸಮೀಕ್ಷೆ ಹಿನ್ನೆಲೆ ಶಾಲೆಗಳ ಅವಧಿ ಬದಲಾವಣೆ: ಸಮೀಕ್ಷೆ ಕಾರ್ಯ ವಿಸ್ತರಣೆ

ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕರ್ನಾಟಕ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆಯನ್ನು ಕೈಗೊಳ್ಳುತಿರುವ ಹಿನ್ನೆಲೆಯಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಸಮಯ ಮರು ನಿಗದಿ ಮಾಡಲಾಗಿದೆ.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಕರ್ನಾಟಕ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆಯನ್ನು ಡಿಜಿಟಲ್ ವಿಧಾನದಲ್ಲಿ ಕೈಗೊಳ್ಳುವುದು ಮತ್ತು ಸಮೀಕ್ಷೆಯನ್ನು ಡಿಜಿಟಲ್ ವಿಧಾನದಲ್ಲಿ ಮಾಡಲು ತಂತ್ರಾಂಶದ ಅಭಿವೃದ್ಧಿ ಮತ್ತು ಉಸ್ತುವಾರಿಯನ್ನು ಕೈಗೊಳ್ಳುವುದು, ಹಿಂದುಳಿದ ವರ್ಗಗಳ ಆಯೋಗವು ನಡೆಸುವ ಸಮೀಕ್ಷೆಗೆ ಸಾರ್ವಜನಿಕವಾಗಿ ಲಭ್ಯವಿರುವ ಚುನಾವಣಾ ಮತದಾರರ ಪಟ್ಟಿಯನ್ನು ಉಪಯೋಗಿಸಿಕೊಂಡು ಸಮೀಕ್ಷಾ ಕಾರ್ಯವನ್ನು ಕೈಗೊಳ್ಳಲು ಅಧಿಕಾರಿಗಳನ್ನು ಹಾಗೂ ಶಿಕ್ಷಕರನ್ನು ಹಾಗೂ ಇತರೆ ಸಿಬ್ಬಂದಿಗಳು ಕೆಲಸ ನಿರ್ವಹಿಸುವಂತೆ ಆದೇಶಿಸಿದೆ. ಸದರಿ ಆದೇಶದಂತೆ ಸಮೀಕ್ಷೆಯನ್ನು ನಡೆಸಲಾಗುತ್ತಿದೆ.

ಸಮೀಕ್ಷೆಯನ್ನು ಗ್ರೇಟ‌ರ್ ಬೆಂಗಳೂರು ಆಥಾರಿಟಿ ವ್ಯಾಪ್ತಿಯಲ್ಲಿ ದಿನಾಂಕ: 04-10-2025 ರಿಂದ ಪ್ರಾರಂಭಿಸಲಾಗಿದ್ದು, ರಾಜ್ಯದ ಇತರೆ ಭಾಗಗಳಲ್ಲಿ ದಿನಾಂಕ: 22-09-2025 ರಿಂದ ಪ್ರಾರಂಭಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಮೀಕ್ಷೆಯು ಪೂರ್ಣಗೊಳ್ಳಲು ಹೆಚ್ಚಿನ ಕಾಲಾವಕಾಶದ ಅಗತ್ಯವಿರುವುದನ್ನು ಮನಗೊಂಡು, ದಿನಾಂಕ: 26.09.2025 ರಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚರ್ಚಿಸಿರುವಂತೆ ಸಮೀಕ್ಷೆಯು ರಜಾ ಅವಧಿಯ ನಂತರವು ಮುಂದುವರೆಯುವ ಸಾಧ್ಯತೆ ಇರುವುದರಿಂದ ರಜಾ ಅವಧಿಯ ನಂತರ ಶಾಲೆ ನಡೆಯುವ ಸಮಯವನ್ನು ಪರೀಷ್ಮರಿಸಿ ಆದೇಶಿಸುವುದು ಸೂಕ್ತ ಎಂದು ತೀರ್ಮಾನಿಸಿ ಅದರಂತೆ ಕ್ರಮವಹಿಸಲು ನಿರ್ಧರಿಸಲಾಯಿತು.

ಸಮೀಕ್ಷೆ ಪೂರ್ಣಗೊಳಿಸಲು ಇನ್ನೂ ಹೆಚ್ಚಿನ ಕಾಲಾವಕಾಶದ ಅಗತ್ಯವಿರುವುದಾಗಿ ತಿಳಿಸಿರುವ ಹಿನ್ನೆಲೆಯಲ್ಲಿ, ಶಾಲಾ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಮಧ್ಯವಾರ್ಷಿಕ ರಜಾ ದಿನಗಳ ನಂತರ ಶಾಲಾ ತರಗತಿಗಳು ಸಮೀಕ್ಷೆಯ ಕಾರಣದಿಂದ ಕುಂಠಿತವಾಗಬಾರದು ಎನ್ನುವ ದೃಷ್ಟಿಯಿಂದ ಈ ಕೆಳಗಿನ ಸೂಚನೆಗಳಂತೆ ಕ್ರಮವಹಿಸುವುದು.

ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ: ಈ ವ್ಯಾಪ್ತಿಯಲ್ಲಿನ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ದಿ: 8-10-2025 ರಿಂದ 24-10-2025 ರವರೆಗೆ ಶಾಲಾ ತರಗತಿಗಳನ್ನು ಬೆಳಿಗೆ 8.00 ಗಂಟೆಯಿಂದ ಅಪರಾಹ್ನ 1.00 ಗಂಟೆಯವರೆಗೆ ನಿರ್ವಹಿಸಿ, ನಂತರದ ಅವಧಿಯಲ್ಲಿ ಸಮೀಕ್ಷೆ ಕಾರ್ಯಕ್ಕೆ ನಿಯೋಜಿಸಿರುವ ಶಿಕ್ಷಕರು ಸಮೀಕ್ಷಾ ಕಾರ್ಯವನ್ನು ನಿರ್ವಹಿಸುವುದು. ಸಮೀಕ್ಷೆಯನ್ನು ಕೈಗೊಂಡು ದಿನಾಂಕ: 24-10-2025 ರ ಅಂತ್ಯದೊಳಗೆ ಪೂರ್ಣಗೊಳಿಸುವುದು.

ರಾಜ್ಯದ ಇತರೆ ಭಾಗಗಳಲ್ಲಿ (ಗ್ರೇಟರ್ ಬೆಂಗಳೂರು ವ್ಯಾಪ್ತಿ ಹೊರತುಪಡಿಸಿ ಉಳಿದ ಭಾಗಗಳು): ಈ ವ್ಯಾಪ್ತಿಯಲ್ಲಿನ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ದಿ: 8-10-2025 ರಿಂದ 12-10-2025 ರವರೆಗೆ ಶಾಲಾ ತರಗತಿಗಳನ್ನು ಬೆಳಿಗ್ಗೆ 8.00 ಗಂಟೆಯಿಂದ ಅಪರಾಹ್ನ 1.00 ಗಂಟೆಯವರೆಗೆ ನಿರ್ವಹಿಸಿ, ನಂತರದ ಅವಧಿಯಲ್ಲಿ ಸಮೀಕ್ಷೆ ಕಾರ್ಯಕ್ಕೆ ನಿಯೋಜಿಸಿರುವ ಶಿಕ್ಷಕರು ಸಮೀಕ್ಷಾ ಕಾರ್ಯವನ್ನು ನಿರ್ವಹಿಸುವುದು. ಸಮೀಕ್ಷೆಯನ್ನು ರಜಾ ದಿನಗಳಲ್ಲಿಯೂ ಕೈಗೊಂಡು ದಿನಾಂಕ: 12-10-2025 ರ ಅಂತ್ಯದೊಳಗೆ ಪೂರ್ಣಗೊಳಿಸುವುದು.

ಈ ಎಲ್ಲ ಅಂಶಗಳಂತೆ ರಾಜ್ಯದ ಸರ್ಕಾರಿ ಹಾಗೂ ಸರ್ಕಾರಿ ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು ಕಾರ್ಯನಿರ್ವಹಿಸುವುದು.

ವಿಶೇಷ ಸೂಚನೆ:- ಕಾಲಕಾಲಕ್ಕೆ ಸರ್ಕಾರದಿಂದ ನೀಡುವ ಸೂಚನೆಗಳನ್ನು ಮತ್ತು ನಿರ್ದೇಶನಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular