ಧರ್ಮಸ್ಥಳ: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ಉದ್ವಿಗ್ನ ಸ್ಥಿತಿ ಉಂಟಾಗಿದೆ. ಪ್ರತಿಷ್ಠಿತ ಕುಟುಂಬದ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಯುಟ್ಯೂಬರ್ ಗಳ ಮೇಲೆ ಹಲ್ಲೆ ನಡೆಸಲಾಗಿದೆ. ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ ಎನ್ನಲಾಗಿದೆ.
ಅಸ್ಥಿಪಂಜರ ಶೋಧದ ನಡುವೆ ಧರ್ಮಸ್ಥಳ ಉದ್ವಿಗ್ನವಾಗಿದೆ. ಮೂವರು ಯೂಟ್ಯೂಬರ್ ಗಳ ಮೇಲೆ ಹಲ್ಲೆ ನಡೆಸಲಾಗಿದೆ. ಅವರ ಕ್ಯಾಮರಾಗಳನ್ನು ಹಾಳು ಮಾಡಲಾಗಿದೆ. ನೇತ್ರಾವತಿಯ ಪಾಂಗಳ ಎಂಬಲ್ಲಿ ಹಲ್ಲೆ ನಡೆಸಲಾಗಿದ್ದು, ಉದ್ವಿಗ್ನ ಸ್ಥಿತಿ ಉಂಟಾಗಿದೆ. ಯುವಕರನ್ನು ಚದುರಿಸಲು ಪೊಲೀಸರು ಹರಸಾಹಸ ನಡೆಸಿದ್ದಾರೆ
ಹಲ್ಲೆಯನ್ನು ಖಂಡಿಸಿ ಪಾಂಗಳ ಕ್ರಾಸ್ ಬಳಿ ಜನ ಗುಂಪುಗೂಡಿದ್ದು, ಸ್ಥಳದಲ್ಲಿ ಕೈಮೀರಿದ ಪರಿಸ್ಥಿತಿ ಉಂಟಾಗಿದ್ದರಿಂದ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.
ಹಲ್ಲೆಗೊಳಗಾದ ಯೂಟ್ಯೂಬರ್ ವೊಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರತಿಷ್ಠಿತ ಕುಟುಂಬದ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಯೂಟ್ಯೂಬರ್ ಗಳ ಮೇಲೆ ಹಲ್ಲೆ ಮಾಡಲಾಗಿದೆ. ಇದರಿಂದಾಗಿ ಹಲ್ಲೆ ನಡೆಸಿರುವುದನ್ನು ವಿರೋಧಿಸಿ ಯೂಟ್ಯೂಬರ್ ಗಳ ಪರ ಯುವಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎರಡೂ ಕಡೆಯ ಯುವಕರ ನಡುವೆ ಕೈ ಕೈ ಮಿಲಾವಣಿ ಹಂತ ತಲುಪಿದ್ದರಿಂದ ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರು ಹರಸಾಹಸ ನಡೆಸಿ ಗುಂಪು ಚದುರಿಸಿದ್ದಾರೆ. ಸ್ಥಳಕ್ಕೆ ಭಾರೀ ಸಂಖ್ಯೆಯ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ.