ಶಿವಮೊಗ್ಗ: ರಸ್ತೆ ಅಗಲೀಕರಣದ ವೇಳೆ ಗುಡ್ಡ ಕುಸಿದು ಮೂವರು ಸಾವನ್ನಪ್ಪಿದ ಘಟನೆ ಕುಂದಾಪುರ -ಶಿವಮೊಗ್ಗ ಹೆದ್ದಾರಿಯ ಹುಲಿಕಲ್ ಘಾಟ್ ನಲ್ಲಿ ನಡೆದಿದೆ.
ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹುಲಿಕಲ್ ಘಾಟ್ ನಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ವೇಳೆ ದುರಂತ ಸಂಭವಿಸಿದೆ. ಓರ್ವ ಹೊರ ರಾಜ್ಯದ ಕಾರ್ಮಿಕ ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ಕಾಮಗಾರಿಯ ನಿರ್ವಹಣೆ ಮಾಡುತ್ತಿದ್ದ ರಾಘವೇಂದ್ರ ಮೃತಪಟ್ಟಿದ್ದಾರೆ.
ರಾಘವೇಂದ್ರ(37), ರಾಜು(30), ಶಬ್ಬೀರ್(40) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಸುಮಂತ್, ಪರಮೇಶ್ ಗಾಯಗೊಂಡಿದ್ದು, ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ರಸ್ತೆ ಅಗಲೀಕರಣ ಕಾಮಗಾರಿ ವೇಳೆ ಗುಡ್ಡ ಕುಸಿದಿದೆ. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿ, ಸ್ಥಳೀಯರು ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.
ಚಿತ್ರಕೃಪೆ: ಎಐ

