BREAKING NEWS: ವಾಲ್ಮೀಕಿ ನಿಗಮ ಹಗರಣ ಕೇಸ್: ಹಲವರ ಆಸ್ತಿ ಮುಟ್ಟುಗೋಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 5 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.

ನೆಕ್ಕುಂಟಿ ನಾಗರಾಜ್, ಚಂದ್ರಮೋಹನ್, ಗೋಲಪಲ್ಲಿ ಕಿಶೋರ ರೆಡ್ಡಿ, ಎಟಕೇರಿ ಸತ್ಯನಾರಾಯಣಗೆ ಸೇರಿದ ಆಸ್ತಿಯನ್ನು ಇಡಿ ಜಪ್ತಿ ಮಾಡಿದೆ. 4.45 ಮೌಲ್ಯದ ಭೂಮಿ ಫ್ಲಾಟ್ ಹಾಗೂ ಫಸ್ಟ್ ಫೈನಾನ್ಸ್ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕಿನಲ್ಲಿದ್ದ 50 ಲಕ್ಷ ನಗದು ಜಪ್ತಿ ಮಾಡಿದೆ.

“ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತ (KMVSTDCL) ಪ್ರಕರಣದಲ್ಲಿ, PMLA, 2002 ರ ನಿಬಂಧನೆಗಳ ಅಡಿಯಲ್ಲಿ ಬೆಂಗಳೂರಿನ ED, ಸ್ಥಿರ ಆಸ್ತಿಗಳು ಮತ್ತು ಬ್ಯಾಂಕ್ ಬ್ಯಾಲೆನ್ಸ್ ರೂಪದಲ್ಲಿ 5 ಕೋಟಿ ರೂ. (ಅಂದಾಜು) ವರೆಗಿನ ಆಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ” ಎಂದು ಇಡಿ ತಿಳಿಸಿದೆ.

ವಾಲ್ಮೀಕಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಆತ್ಮಹತ್ಯೆಗೆ ಶರಣಾಗಿದ್ದರು. ನಂತರ ರಾಜ್ಯ ಪೊಲೀಸರು ಹಾಗೂ ಸಿಬಿಐ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದವು. ನಿಗಮದ ಹಣ ಅಕ್ರಮ ವರ್ಗಾವಣೆ ಹಿನ್ನೆಲೆಯಲ್ಲಿ ಇಡಿ ಕೂಡ ತನಿಖೆ ಕೈಗೊಂಡಿತ್ತು. ನಿಗಮದ ಹಣವನ್ನು ಅಕ್ರಮವಾಗಿ ಆರೋಪಿಗಳು ವರ್ಗಾವಣೆ ಮಾಡಿದ್ದರು. ನಕಲಿ ದಾಖಲೆ ಸೃಷ್ಟಿಸಿ ನಿಗಮಕ್ಕೆ 89.63 ಕೋಟಿ ರೂಪಾಯಿ ವಂಚಿಸಲಾಗಿತ್ತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read