ರಾಮನಗರ : ಚನ್ನಪಟ್ಟಣ ಉಪಚುನಾವಣೆಗೆ ‘ಮೈತ್ರಿ’ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಹೌದು. ನವೆಂಬರ್ 13 ರಂದು ನಡೆಯಲಿರುವ ಚನ್ನಪಟ್ಟಣ ಉಪಚುನಾವಣೆಗೆ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಇಂದು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ನಿಖಿಲ್ ಕುಮಾರಸ್ವಾಮಿ ಭರ್ಜರಿ ರೋಡ್ ಶೋ ನಡೆಸಿದ್ದಾರೆ.ಚನ್ನಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ತಹಶೀಲ್ದಾರ್ ಗೆ ನಾಮಪತ್ರ ಸಲ್ಲಿಸಿದರು.
ಶೇರ್ವಾ ಸರ್ಕಲ್ ನಿಂದ ತಹಶೀಲ್ದಾರ್ ಕಚೇರಿವರೆಗೆ ರೋಡ್ ಶೋ ನಡೆಸಿ ಬಳಿಕ ನಾಮಪತ್ರ ಸಲ್ಲಿಸಿದ್ದಾರೆ.ಈ ವೇಳೆ ಮಾಜಿ ಸಿಎಂ ಕುಮಾರಸ್ವಾಮಿ, ಡಿವಿ ಸದಾನಂದಗೌಡ, ಆರ್.ಅಶೋಕ್ ಮತ್ತಿತರಿದ್ದರು. ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಪಿ ಯೋಗೇಶ್ವರ್ ಸ್ಪರ್ಧಿಸುತ್ತಿದ್ದು,ನಿಖಿಲ್ ಗೆ ಫೈಟ್ ಕೊಡಲಿದ್ದಾರೆ.
https://twitter.com/JanataDal_S/status/1849716196226064478?ref_src=twsrc%5Egoogle%7Ctwcamp%5Eserp%7Ctwgr%5Etweet