ಉಡುಪಿ: ನವೆಂಬರ್ 28ರಂದು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಶ್ರೀ ಕೃಷ್ಣನ ದರ್ಶನಕ್ಕಾಗಿ ಉಡುಪಿಗೆ ಆಗಮಿಸಿ ದರ್ಶನ ಪಡೆಯಲಿದ್ದಾರೆ.
ನವೆಂಬರ್ 28ರಂದು ಮಧ್ಯಾಹ್ನ 12 ಗಂಟೆಗೆ ಶ್ರೀ ಕೃಷ್ಣ ಮಠಕ್ಕೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ. ಉಡುಪಿ ಶ್ರೀಕೃಷ್ಣನ ದರ್ಶನ ಪಡೆಯಲಿದ್ದಾರೆ.
ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದ ನಂತರ ಪ್ರಧಾನಿ ಮೋದಿಯವರು ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಜೊತೆಗೆ ಮಾತುಕತೆ ನಡೆಸಲಿದ್ದಾರೆ. ಗೀತಾ ಜಯಂತಿ ಹಿನ್ನೆಲೆಯಲ್ಲಿ ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣ ಬೃಹತ್ ಗೀತೋತ್ಸವ ಸಮಾರಂಭದಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ. ಈಗಾಗಲೇ ಪ್ರಧಾನಿಯವರ ಕಾರ್ಯಕ್ರಮಕ್ಕಾಗಿ ಪೂರ್ವಸಿದ್ಧತೆ ಆರಂಭವಾಗಿವೆ ಎಂದು ಹೇಳಲಾಗಿದೆ.
