HomeLatest NewsBREAKING: ರಾಜ್ಯದಲ್ಲಿ ಗ್ರಾಮಪಂಚಾಯಿತಿ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಿಲ್ಲ: ಚುನಾವಣಾ ಆಯೋಗ ಸ್ಪಷ್ಟನೆ

BREAKING: ರಾಜ್ಯದಲ್ಲಿ ಗ್ರಾಮಪಂಚಾಯಿತಿ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಿಲ್ಲ: ಚುನಾವಣಾ ಆಯೋಗ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗೆ ಯಾವುದೇ ವೇಳಾಪಟ್ಟಿಯನ್ನು ಪ್ರಕಟಿಸಿಲ್ಲ ಎಂದು ರಾಜ್ಯ ಚುನಾವಣಾ ಆಯೋಗದಿಂದ ಸ್ಪಷ್ಟನೆ ನೀಡಲಾಗಿದೆ.

ಚುನಾವಣಾ ವೇಳಾಪಟ್ಟಿ ಪ್ರಕಟಗೊಂಡಿರುವ ಬಗ್ಗೆ ಸುಳ್ಳು ಮಾಹಿತಿಯು ಹರಿದಾಡುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿ ಹರಿದಾಡುತ್ತಿರುವುದು ಗಮನಕ್ಕೆ ಬಂದಿದೆ. ರಾಜ್ಯ ಚುನಾವಣಾ ಆಯೋಗ ಯಾವುದೇ ವೇಳಾಪಟ್ಟಿ ಪ್ರಕಟಿಸಿರುವುದಿಲ್ಲ. ಆಯೋಗ ಸುದ್ದಿಗೋಷ್ಠಿ ಕರೆದು ಚುನಾವಣೆಯ ವೇಳಾಪಟ್ಟಿ ಪ್ರಕಟಿಸುತ್ತದೆ. ಪ್ರಸ್ತುತ ಹರಿದಾಡುತ್ತಿರುವ ಚುನಾವಣಾ ವೇಳಾಪಟ್ಟಿ ಸುಳ್ಳು ಮಾಹಿತಿಯಾಗಿದೆ. ಸಾರ್ವಜನಿಕರು ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು ಎಂದು ರಾಜ್ಯ ಚುನಾವಣಾ ಆಯೋಗದಿಂದ ಮಾಧ್ಯಮ ಪ್ರಕಟಣೆ ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular