ಬೆಂಗಳೂರು: ಮೂರು ತಿಂಗಳಲ್ಲಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ ಎನ್ನುವ ಹೇಳಿಕೆ ನೀಡಿದ್ದ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ. ಇಕ್ಬಾಲ್ ಹುಸೇನ್ ಅವರ ಹೇಳಿಕೆಯಿಂದ ಪಕ್ಷಕ್ಕೆ ಮುಜುಗರವಾಗಿದೆ. ಇಕ್ಬಾಲ್ ಆಶಿಸ್ತಿನ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಒಂದು ವಾರದೊಳಗೆ ಸಮಜಾಯಿಷಿ ನೀಡುವಂತೆ ಇಕ್ಬಾಲ್ ಹುಸೇನ್ ಗೆ ಡಿಕೆ ನೋಟಿಸ್ ನೀಡಿದ್ದಾರೆ.
ಮೂರು ತಿಂಗಳಲ್ಲಿ ಡಿ.ಕೆ. ಶಿವಕುಮಾರ್ ಸಿಎಂ ಆಗುತ್ತಾರೆ ಎಂದು ಇಕ್ಬಾಲ್ ಹುಸೇನ್ ನೀಡಿದ್ದ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು.