ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ.
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಆದೇಶ ಹೊರಡಿಸಲಾಗಿದೆ. ಒಂದು ಲಕ್ಷ ರೂಪಾಯಿ ಮೊತ್ತದ ಬಾಂಡ್, ಒಬ್ಬರು ಶೂರಿಟಿಯನ್ನು ಒದಗಿಸಲು ಕೋರ್ಟ್ ಸೂಚನೆ ನೀಡಿದೆ. ತನಿಖೆಗೆ ಸಹಕರಿಸಬೇಕು. ಸಾಕ್ಷ್ಯಾಧಾರಗಳನ್ನು ನಾಶಪಡಿಸಬಾರದು ಎಂದು ಎನ್. ರವಿಕುಮಾರ್ ಗೆ ಷರತ್ತು ವಿಧಿಸಿ ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಿದೆ.