ಬೆಂಗಳೂರು : ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ ಮಾಡಿದ್ದ ಮೂವರು ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ನಟಿಗೆ ಅಶ್ಲೀಲ ಮೆಸೇಜ್ ಮಾಡಿದ್ದ ಮೂವರು ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಸಿಸಿಬಿ ಸೈಬರ್ ಪೊಲೀಸರು ಇಬ್ಬರನ್ನು ಬಂಧಿಸಿ , ಓರ್ವನನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳಿಸುತ್ತಿದ್ದ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸಲಾಗಿತ್ತು. ಈ ಕುರಿತಾಗಿ ನಟಿ ರಮ್ಯಾ ಅವರು 43 ಖಾತೆಗಳನ್ನು ಉಲ್ಲೇಖಿಸಿ ದೂರು ನೀಡಿದ್ದರು. ಬೆಂಗಳೂರು ಪೊಲೀಸ್ ಕಮಿಷನರ್ ಗೆ ರಮ್ಯಾ 4 ಪುಟಗಳ ದೂರು ನೀಡಿದ್ದು, ದೂರು ಸ್ವೀಕರಿಸಿದ ಪೊಲೀಸರು ತನಿಖೆ ಕೈಗೊಂಡಿದ್ದರು.
ಇಬ್ಬರು ಅರೆಸ್ಟ್, ಓರ್ವ ವಶಕ್ಕೆ
ನಟಿ, ಸಂಸದೆ ರಮ್ಯಾ ಅವರುಗೆ ಅಶ್ಲೀಲ ಕಮೆಂಟ್ ವಿಚಾರವಾಗಿ ಈಗಾಗಲೇ ಇಬ್ಬರನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಮಾಹಿತಿ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಮಿಷನರ್ ಸೀಮಂತ್ ಕುಮಾರ್ ಸಿಂಗ್, ಜಾಲತಾಣಗಳಲ್ಲಿ ನಟಿ ರಮ್ಯಾ ಬಗ್ಗೆ ಅಶ್ಲೀಲ ಕಮೆಂಟ್ ಮಾಡಿದ್ದ ಇಬ್ಬರನ್ನು ಬಂಧಿಸಲಾಗಿದೆ. ಸಿಸಿಬಿ ಪೊಲೀಸರು 13 ಜನರ ಮಾಹಿತಿ ಸಂಗ್ರಹಿಸಿದ್ದಾರೆ. ಅವರಲ್ಲಿ ಸದ್ಯ ಇಬ್ಬರನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ. ಬಂಧಿತರು ತಮ್ಮ ಜಾಲತಾಣಗಳ ಖಾತೆ ಮೂಲಕ ಕಮೆಂಟ್ ಕಳುಹಿಸುತ್ತಿದ್ದರು ಎಂದರು.
ಸಾಮಾಜಿಕ ಜಾಲತಾಣಗಳಲ್ಲಿ ಕಮೆಂಟ್ ಮಾಡುವವರ ಮೇಲೆ ನಿಗಾ ವಹಿಸಲಾಗುವುದು. ಅಸಭ್ಯ ಕಮೆಂಟ್ ಮಾಡಿದ್ರೆ ಕೇಸ್ ದಾಖಲಿಸಿ ಅರೆಸ್ಟ್ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.