HomeKarnatakaBREAKING : 'ಅಶ್ಲೀಲ ವಿಡಿಯೋ' ಹಂಚಿಕೆ ಕೇಸ್ : ಮಾಜಿ ಶಾಸಕ 'ಪ್ರೀತಮ್ ಗೌಡ' ಬಂಧಿಸದಂತೆ...

BREAKING : ‘ಅಶ್ಲೀಲ ವಿಡಿಯೋ’ ಹಂಚಿಕೆ ಕೇಸ್ : ಮಾಜಿ ಶಾಸಕ ‘ಪ್ರೀತಮ್ ಗೌಡ’ ಬಂಧಿಸದಂತೆ ಹೈಕೋರ್ಟ್ ಆದೇಶ

ಬೆಂಗಳೂರು : ಅಶ್ಲೀಲ ವಿಡಿಯೋ ಹಂಚಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಪ್ರೀತಮ್ ಗೌಡರನ್ನು ಬಂಧಿಸದಂತೆ ಹೈಕೋರ್ಟ್ ಆದೇಶ ಹೊರಡಿಸಿದೆ.

ಈ ಮೂಲಕ ಪ್ರೀತಮ್ ಗೌಡಗೆ ಬಿಗ್ ರಿಲೀಫ್ ಸಿಕ್ಕಿದೆ. ಹಾಗೂ ಪ್ರಕರಣದ ಬಗ್ಗೆ ತನಿಖೆ ಮುಂದುವರಿಸಲು ಎಸ್ಐಟಿಗೆ ತಿಳಿಸಿದ್ದು, ವಿಚಾರಣೆಗೆ ಸಹಕರಿಸಲು ಅರ್ಜಿದಾರ ಪ್ರೀತಮ್ ಗೌಡಗೆ ಹೈಕೋರ್ಟ್ ಸೂಚನೆ ನೀಡಿದೆ.

ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದೆ ಎನ್ನಲಾದ ಅಶ್ಲೀಲ ದೃಶ್ಯಾವಳಿ ಒಳಗೊಂಡ ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಪ್ರೀತಮ್ ಗೌಡ ವಿರುದ್ಧ ಪ್ರಕರಣ ದಾಖಲಾಗಿತ್ತು. ಪೆನ್ ಡ್ರೈವ್ ಹಗರಣದ ತನಿಖೆ ನಡೆಸುತ್ತಿರುವ ಎಸ್ಐಟಿಗೆ ಹಾಸನ ಜಿಲ್ಲೆಯ ಮಹಿಳೆಯೊಬ್ಬರು ದೂರು ನೀಡಿದ್ದು, ಪ್ರಜ್ವಲ್ ರೇವಣ್ಣ ಮತ್ತು ಬಿಜೆಪಿ ಮಾಜಿ ಶಾಸಕ ಪ್ರೀತಮ್ ಗೌಡ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು. ಹಾಗೆತೇ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗಾಗಿ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲ್ ನಲ್ಲಿದ್ದ ಪ್ರಜ್ವಲ್ ಅವರನ್ನು ಬಾಡಿ ವಾರೆಂಟ್ ಮೇಲೆ ಎಸ್ಐಟಿ ನಾಲ್ಕು ದಿನ ವಶಕ್ಕೆ ಪಡೆದುಕೊಂಡಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದೂರುದಾರ ಮಹಿಳೆಯ ಅಶ್ಲೀಲ ವಿಡಿಯೋವನ್ನು ಪ್ರಜ್ವಲ್ ಚಿತ್ರಕರಿಸಿದ ಆರೋಪವಿದ್ದು, ಆ ವಿಡಿಯೋ ಒಳಗೊಂಡ ಪೆನ್ ಡ್ರೈವ್ ಅನ್ನು ಸಾರ್ವಜನಿಕರಿಗೆ ಹಂಚಿಕೆ ಮಾಡಿದ್ದಾಗಿ ಮಾಜಿ ಶಾಸಕ ಪ್ರೀತಂ ಗೌಡ ಮತ್ತು ಇತರರ ವಿರುದ್ಧ ಆರೋಪ ಕೇಳಿ ಬಂದಿದ್ದು ದೂರು ದಾಖಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular