ಚಾಮರಾಜನಗರ: ರಸ್ತೆ ತಡೆಗೋಡೆಗೆ ಕಾರ್ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಐವರು ಗಾಯಗೊಂಡಿದ್ದಾರೆ.
ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಕೆಂಪಯ್ಯನಹಟ್ಟಿ ಗ್ರಾಮದ ಸಮೀಪ ಅಪಘಾತ ಸಂಭವಿಸಿದೆ. ಹನೂರಿನ ಒಡೆಯರಪಾಳ್ಯದ ಸಂತೋಷ್(29) ಮೃತಪಟ್ಟಿದ್ದಾರೆ. ಐವರು ಗಂಭೀರವಾಗಿ ಗಾಯಗೊಂಡಿದ್ದು, ಕೊಳ್ಳೇಗಾಲ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಸ್ಥಳಕ್ಕೆ ರಾಮಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

