ರಾಯಚೂರು: ಟಾಟಾ ಏಸ್ ವಾಹನ ಪಲ್ಟಿಯಾಗಿ ಒಬ್ಬರು ಮೃತಪಟ್ಟಿದ್ದು, ಮೂವರು ಗಾಯಗೊಂಡ ಘಟನೆ ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಮುದಗಲ್ ಸಮೀಪ ನಡೆದಿದೆ.
ಸೋಮನಾಯ್ಕ ತಾಂಡಾದ ನಿವಾಸಿ ಕೃಷ್ಣಪ್ಪ ರಾಜಪ್ಪ(55) ಮೃತಪಟ್ಟ ಪ್ರಯಾಣಿಕ ಎಂದು ಹೇಳಲಾಗಿದೆ. ಮುದಗಲ್ ಪಟ್ಟಣದಿಂದ ಮಾರಲದಿನ್ನಿ ಗ್ರಾಮಕ್ಕೆ ಹೋಗುವಾಗ ಅಪಘಾತ ಸಂಭವಿಸಿದೆ. ಮಾರ್ಗ ಮಧ್ಯೆ ಚಾಲಕನ ನಿಯಂತ್ರಣ ತಪ್ಪಿದ ಟಾಟಾ ಏಸ್ ವಾಹನ ಪಲ್ಟಿಯಾಗಿ ಅಪಘಾತ ಸಂಭವಿಸಿದೆ. ಗಾಯಗೊಂಡ ಮೂವರನ್ನು ಮುದಗಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಮುದಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.