ಡಿಜಿಟಲ್ ಡೆಸ್ಕ್ : ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಹಾಶಿಂ ಮೂಸಾ ಸೇರಿ ಮೂವರು ಉಗ್ರರನ್ನುಭಾರತೀಯ ಸೇನೆ ಹೊಡೆದುರುಳಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಭಯೋತ್ಪಾದನಾ ನಿಗ್ರಹದಲ್ಲಿ ಪ್ರಮುಖ ಯಶಸ್ಸಿನಲ್ಲಿ, ಭಾರತೀಯ ಸೇನೆಯ ವಿಶೇಷ ಪಡೆಗಳು ಇತ್ತೀಚಿನ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹಿಂದಿನ ಮಾಸ್ಟರ್ ಮೈಂಡ್ ಹಾಶಿಮ್ ಮೂಸಾನನ್ನು ಹೊಡೆದುರುಳಿಸಿದವು.
ಪಹಲ್ಗಾಮ್ ದಾಳಿಯ ಮೂವರು ಶಂಕಿತ ಉಗ್ರರನ್ನು ಭದ್ರತಾಪಡೆ ಹಾಗೂ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಹೊಡೆದುರುಳಿಸಲಾಗಿದೆ.ಜಮ್ಮು-ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ಭದ್ರತಾಪಡೆಗಳು ನಡೆಸಿದ ಎನ್ ಕೌಂಟರ್ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ.
ಸೇನೆ, ಜಮ್ಮು-ಕಾಶ್ಮೀರ ಪೊಲೀಸರು, ಸಿಆರ್ ಪಿಎಫ್ ಸೇರಿ ‘ಆಪರೇಷನ್ ಮಹಾದೇವ್’ ಕಾರ್ಯಾಚರಣೆ ನಡೆಸಿದ್ದು, ಮೂವರು ಉಗ್ರರನ್ನು ಸದೆಬಡಿಯಲಾಗಿದೆ.ಏಪ್ರಿಲ್ 22ರಂದು ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ದಾಳಿ ನಡೆಸಿದ್ದ ಉಗ್ರರು 26 ಪ್ರವಾಸಿಗರನ್ನು ಗುಂಡಿಟ್ಟು ಹತ್ಯೆಗೈದಿದ್ದರು.
On Operation Sindoor, Defence Minister Rajnath Singh says, "A clear message has been given to those who support terrorism that India is resolute in defending its motherland. Let us all rise above party differences, taking inspiration from the mantra of 'Sangachchhadhwam… pic.twitter.com/MLZv9IhoRK
— ANI (@ANI) July 28, 2025