ಬೆಂಗಳೂರು: ಬೆಂಗಳೂರಿನ ತಾಜ್ ವೆಸ್ಟೆಂಡ್ ಹೋಟೆಲ್ ಗೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ನುಗ್ಗಿದ ಪ್ರಕರಣದಕ್ಕೆ ಸಂಬಂಧಿಸಿದಂತೆ ಜಂಟಿ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಪ್ರಕರಣ ತನಿಖೆಗೆ ಆದೇಶಿಸಲಾಗಿದೆ.
ಕೇಂದ್ರ ಸರ್ಕಾರದ ಕಾರ್ಯಕ್ರಮ ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿ ನಡೆಯುತ್ತಿದ್ದಾಗ ಏಕಾಏಕಿ 40ಕ್ಕೂ ಹೆಚ್ಚು ಕಾರ್ಯಕರ್ತರು ಹೇಗೆ ನುಗ್ಗಿದರು? ಹೋಟೆಲ್ ಬಳಿ ಎಷ್ಟು ಪೊಲೀಸ್ ಸಿಬ್ಬಂದಿ ಯೋಜನೆ ಮಾಡಿದ್ದರು. ಪೊಲೀಸ್ ಭದ್ರತೆಯಲ್ಲಿ ವೈಫಲ್ಯ ಆಗಿದೆಯಾ? ಭದ್ರತಾ ಲೋಪದ ಬಗ್ಗೆ ತನಿಖೆ ಮಾಡಿ ವರದಿ ನೀಡುವಂತೆ ಆದೇಶಿಸಲಾಗಿದೆ.
ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಜಂಟಿ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಪ್ರಕರಣದ ತನಿಖೆಗೆ ಆದೇಶಿಸಿದ್ದಾರೆ.