BREAKING: ರಾಜ್ಯದಲ್ಲಿ ‘ಮೈಕ್ರೋ ಫೈನಾನ್ಸ್’ ಕಿರುಕುಳ ತಡೆಗೆ ಇಂದು ಅಥವಾ ನಾಳೆಯೊಳಗೆ ‘ಸುಗ್ರೀವಾಜ್ಞೆ’ ಜಾರಿ : CM ಸಿದ್ದರಾಮಯ್ಯ

ಮೈಸೂರು : ‘ಮೈಕ್ರೋ ಫೈನಾನ್ಸ್’ ಕಿರುಕುಳ ತಡೆಗೆ ಇಂದು ಅಥವಾ ನಾಳೆಯೊಳಗೆ ಸುಗ್ರೀವಾಜ್ಞೆ ಜಾರಿಗೊಳಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮೈಸೂರು ಸುತ್ತೂರಿನ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಹದೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಗದ್ದುಗೆ ದರ್ಶನ ಪಡೆದ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ ‘ಮೈಕ್ರೋ ಫೈನಾನ್ಸ್’ ಕಿರುಕುಳ ತಡೆಗೆ ಇಂದು ಅಥವಾ ನಾಳೆಯೊಳಗೆ ಸುಗ್ರೀವಾಜ್ಞೆ ಜಾರಿಗೊಳಿಸುತ್ತೇವೆ, ಯಾರೂ ಆತ್ಮಹತ್ಯೆ ಮಾಡಿಕೊಳ್ಳಬೇಡಿ, ನಿಮ್ಮ ಜೊತೆ ಸರ್ಕಾರ ಇರುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಶ್ರೀಕ್ಷೇತ್ರ ಸುತ್ತೂರು ಮಠದ ಮಹದೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದೆ. 2025ರ ಈ ವರ್ಷ ನಾಡಿನಲ್ಲಿ ಮಳೆ – ಬೆಳೆ ಸಮೃದ್ಧವಾಗಿ ಬಂದು, ಪ್ರತಿ ಮನೆಯಲ್ಲೂ ಸುಖ, ಶಾಂತಿ, ಸಮೃದ್ಧಿ ನೆಲೆಸಲೆಂದು ಭಗವಂತನಲ್ಲಿ ಪ್ರಾರ್ಥಿಸಿದೆ ಎಂದಿದ್ದಾರೆ. ಬಡವರ ಆರ್ಥಿಕ ಅಸಹಾಯಕತೆಯನ್ನು ಶೋಷಿಸುವ ಮೈಕ್ರೋ ಫೈನಾನ್ಸ್ ಗಳ ಅತಿರೇಕದ ವಸೂಲಿ ನಿಯಂತ್ರಿಸಲು ಸುಗ್ರೀವಾಜ್ಞೆ ಮೂಲಕ ಕಠಿಣ ಕಾನೂನು ತರುತ್ತಿದ್ದೇವೆ.ಮೈಕ್ರೋ ಫೈನಾನ್ಸ್ ಗಳ ವಸೂಲಿ ಕ್ರಮಕ್ಕೆ ಯಾರೂ ಆತ್ಮಹತ್ಯೆ ಮಾಡಿಕೊಳ್ಳಬೇಡಿ. ಸರ್ಕಾರ ನಿಮ್ಮ ಜೊತೆಗಿದೆ. ತೊಂದರೆ ಕೊಟ್ಟರೆ ಕಂಪ್ಲೇಂಟ್ ಕೊಡಿ. ಕಾನೂನು ಕ್ರಮ ತಗೆದುಕೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read