BREAKING : 6 ನೇ ದಿನಕ್ಕೆ ಕಾಲಿಟ್ಟ ‘ದೋಸ್ತಿ’ ಪಕ್ಷಗಳ ಪಾದಯಾತ್ರೆ ; ದೂರ ಉಳಿದ ಮಾಜಿ ಸಂಸದೆ ಸುಮಲತಾ..!

ಬೆಂಗಳೂರು : ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ‘ದೋಸ್ತಿ’ ಪಾದಯಾತ್ರೆ 6 ನೇ ದಿನಕ್ಕೆ ಕಾಲಿಟ್ಟಿದ್ದು, ಶಂಖನಾದದ ಮೂಲಕ ಪಾದಯಾತ್ರೆಗೆ ಚಾಲನೆ ನೀಡಲಾಯಿತು.

ಮಂಡ್ಯ ತಾಲೂಕಿನ ತೂಬಿನಕೆರೆಯಿಂದ ಇಂದು ಪಾದಯಾತ್ರೆ ಹೊರಟಿದ್ದು, ಕೆಲವು ಬಿಜೆಪಿ ನಾಯಕರು ಕಾರ್ಯಕರ್ತರ ಜೊತೆ ಭರ್ಜರಿ ಸ್ಟೆಪ್ ಹಾಕಿದರು. ಪಾದಯಾತ್ರೆಯಲ್ಲಿ ಮಂಡ್ಯದ ಮಾಜಿ ಸಂಸದೆ ಸುಮಲತಾ ಭಾಗಿಯಾಗದೇ ದೂರ ಉಳಿದಿರುವುದು  ಹಲವು ಅನುಮಾನಕ್ಕೆ  ಕಾರಣವಾಗಿದೆ. ಇಂದಾದರೂ ಸುಮಲತಾ ಪಾದಯಾತ್ರೆಯಲ್ಲಿ ಭಾಗಿಯಾಗಲಿದ್ದಾರಾ ಎಂಬುದನ್ನು ಕಾದು ನೋಡಬೇಕಾಗಿದೆ.

ಮೊದಲನೇ ದಿನ ಬೆಂಗಳೂರಿನ ಕೆಂಗೇರಿ ಬಳಿ ಕೆಂಪಮ್ಮ ದೇವಸ್ಥಾನದ ಬಳಿ ನಗಾರಿ ಬಾರಿಸುವ ಮೂಲಕ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಮಾಜಿ ಸಿಎಂ, ಕೇಂದ್ರ ಮಂತ್ರಿ HD ಕುಮಾರಸ್ವಾಮಿ ಅವರು ಪಾದಯಾತ್ರೆಗೆ ಚಾಲನೆ ನೀಡಿದ್ದರು. ಇದಾದ ಬಳಿಕ ಬಿಜೆಪಿ-ಜೆಡಿಎಸ್ ನಾಯಕರು ಒಟ್ಟಾಗಿ ಪಾದಯಾತ್ರೆ ಹೊರಟಿದ್ದರು.ಇಂದು ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ‘ದೋಸ್ತಿ’ ಪಾದಯಾತ್ರೆ 6 ನೇ ದಿನಕ್ಕೆ ಕಾಲಿಟ್ಟಿದೆ.

https://twitter.com/BJP4Karnataka/status/1821410854811664842

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read