HomeEntertainmentBREAKING : ಅವಧಿ ಮೀರಿ ಪಬ್ ನಲ್ಲಿ ಪಾರ್ಟಿ : ನಟ ದರ್ಶನ್ ಸೇರಿ...

BREAKING : ಅವಧಿ ಮೀರಿ ಪಬ್ ನಲ್ಲಿ ಪಾರ್ಟಿ : ನಟ ದರ್ಶನ್ ಸೇರಿ 8 ಮಂದಿಗೆ ಪೊಲೀಸ್ ನೋಟಿಸ್

ಬೆಂಗಳೂರು : ನಟ ದರ್ಶನ್ ಅಭಿನಯದ ಕಾಟೇರ ಸಿನಿಮಾ ರಿಲೀಸ್ ಆಗಿ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ.

ಕಾಟೇರ ಸಿನಿಮಾದ ಸಕ್ಸಸ್ ಪಾರ್ಟಿ ಇದೀಗ ವಿವಾದಕ್ಕೆ ಕಾರಣವಾಗಿದ್ದು, ನಟ ದರ್ಶನ್ ಸೇರಿ 8 ಮಂದಿಗೆ ನೋಟಿಸ್ ನೀಡಲಾಗಿದೆ.

ನಟ ದರ್ಶನ್, ಡಾಲಿ ಧನಂಜ, ಯ್, ಚಿಕ್ಕಣ್ಣ, ರಾಕ್ ಲೈನ್ ವೆಂಕಟೇಶ್, ಅಭಿಷೇಕ್ ಅಂಬರೀಷ್, ನಿನಾಸಂ ಸತೀಶ್ , ಸಂಗೀತ ನಿರ್ದೇಶಕ ಹರಿಕೃಷ್ಣ,  ನಿರ್ದೇಶಕ ತರುಣ್ ಸುಧೀರ್    ಸೇರಿ 8 ಮಂದಿಗೆ ನೋಟಿಸ್ ನೀಡಲಾಗಿದೆ. ನೋಟಿಸ್ ತಲುಪಿದ ಕೂಡಲೇ ವಿಚಾರಣೆಗೆ ಹಾಜರಾಗುವಂತೆ ಸುಬ್ರಮಣ್ಯನಗರ ಪೊಲೀಸರು ನೋಟಿಸ್ ನೀಡಿದ್ದಾರೆ ಎಂದು ತಿಳಿದು ಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿನಿಮಾದ ಸಕ್ಸಸ್ ಹಿನ್ನೆಲೆ ಚಿತ್ರತಂಡ ಬೆಂಗಳೂರಿನ ಪಬ್ ವೊಂದರಲ್ಲಿ ಅವಧಿ ಮೀರಿ ಪಾರ್ಟಿ ನಡೆಸಿತ್ತು ಎನ್ನಲಾಗಿದೆ. ತಡರಾತ್ರಿ 1 ಗಂಟೆವರೆಗೆ ಯಾರೆಲ್ಲಾ ಪಾರ್ಟಿ ಮಾಡಿದ್ದಾರೋ ಅವರಿಗೆ ನೋಟಿಸ್ ನೀಡಲಾಗಿದೆ. ಬೆಂಗಳೂರಿನ ರಾಜಾಜಿನಗರದ ಒರಾಯನ್ ಮಾಲ್ ಬಳಿ ಇರುವ ಜೆಟ್ ಲ್ಯಾಗ್ ಪಬ್ನಲ್ಲಿ ಸ್ಟಾರ್ಸ್ ಪಾರ್ಟಿಗೆ ಎಲ್ಲರೂ ಸೇರಿದ್ದರು.

ಹೊಟೇಲ್, ಬಾರ್ ಅಂಡ್ ರೆಸ್ಟೋರೆಂಟ್ ಗೆ ಅನ್ವಯವಾಗುವ ನಿಯಮ ಪ್ರಕಾರ ಮಧ್ಯರಾತ್ರಿ 1 ಗಂಟೆಗೆ ಪಬ್ ಮುಚ್ಚಬೇಕು. ಒಂದು ಗಂಟೆ ಆಗುತ್ತಿದ್ದಂತೆ ಪಾರ್ಟಿ ಪೂರ್ಣಗೊಳಿಸಬೇಕಿತ್ತು, ಅವಧಿ ಮೀರಿ ಪಾರ್ಟಿ ನಡೆಸಿದ ಹಿನ್ನೆಲೆ ಪೊಲೀಸರು ಪಬ್ ಮಾಲೀಕರ ವಿರುದ್ಧ ಎಫ್ ಐ ಆರ್ ದಾಖಲಿಸಿದ್ದರು, ಇದೀಗ ನಟರಿಗೂ ನೋಟಿಸ್ ನೀಡಿದ್ದಾರೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular