HomeLatest NewsBREAKING: ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಲ್ಲಿ ಕುಸಿದು ಬಿದ್ದು ಪ್ರಯಾಣಿಕ ಸಾವು

BREAKING: ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಲ್ಲಿ ಕುಸಿದು ಬಿದ್ದು ಪ್ರಯಾಣಿಕ ಸಾವು

ಚಿಕ್ಕಬಳ್ಳಾಪುರ: ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಲ್ಲಿ ಕುಸಿದು ಬಿದ್ದು ಪ್ರಯಾಣಿಕ ಸಾವನ್ನಪ್ಪಿದ್ದಾರೆ. ಶಿಡ್ಲಘಟ್ಟದಿಂದ ರಾಮಲಿಂಗಾಪುರಕ್ಕೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಲ್ಲಿ ಘಟನೆ ನಡೆದಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ರಾಮಲಿಂಗಾಪುರ ನಿವಾಸಿ ಪಿಳ್ಳ ವೆಂಕಟರಮಣಪ್ಪ ಮೃತಪಟ್ಟ ಪ್ರಯಾಣಿಕ ಎಂದು ಹೇಳಲಾಗಿದೆ. ಘಟನೆ ನಡೆದ ತಕ್ಷಣವೇ ಬಸ್ ಸಮೇತ ಶಿಡ್ಲಘಟ್ಟ ನಗರಕ್ಕೆ ಚಾಲಕ ವಾಪಸ್ ಬಂದಿದ್ದಾರೆ. ಆಸ್ಪತ್ರೆಗೆ ಕರೆದೊಯ್ಯುವ ವೇಳೆಗಾಗಲೇ ವೆಂಕಟರಮಣಪ್ಪ ಮೃತಪಟ್ಟಿದ್ದರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular