ಬೆಂಗಳೂರು: ನೇರಳೆ ಮಾರ್ಗದ ಮೆಟ್ರೋ ರೈಲಿನಲ್ಲಿ ತಾಂತ್ರಿಕ ದೋಷ ಉಂಟಾಗಿದೆ. ಇದರಿಂದ ಕೆಲವು ಮೆಟ್ರೋ ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.
ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದಲ್ಲಿ ತಾಂತ್ರಿಕ ದೋಷ ಉಂಟಾಗಿದೆ. 30 ನಿಮಿಷಗಳ ಕಾಲ ರೈಲಿನಲ್ಲಿಯೇ ಪ್ರಯಾಣಿಕರು ಸಿಲುಕಿದ್ದರು ನಂತರ ಲೋಕೋಪೈಲಟ್ ರೈಲಿನ ಬಾಗಿಲುಗಳನ್ನು ತೆರೆದಿದ್ದಾರೆ. ಬಿಎಂಆರ್‌ಸಿಎಲ್ ಸಿಬ್ಬಂದಿ ತಾಂತ್ರಿಕ ದೋಷ ಸರಿಪಡಿಸುತ್ತಿದ್ದಾರೆ. ಕಳೆದು ಒಂದು ಗಂಟೆಯಿಂದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ
ಕಾರ್ಯಾಚರಣೆ ನಿಯಂತ್ರಣ ಕೇಂದ್ರ (OCC)ದಿಂದ ಪಡೆದ ಮಾಹಿತಿಯಂತೆ, ನೇರಳ ಮಾರ್ಗದ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದಲ್ಲಿ ಸುಮಾರು ಸಂಜೆ 06.32ಕ್ಕೆ ಸಂಚರಿಸುತ್ತಿದ್ದ ಒಂದು ರೈಲಿನಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ.
ಕಾರ್ಯಾಚರಣೆ ಹಾಗೂ ನಿರ್ವಹಣಾ ತಂಡಗಳು ತುರ್ತಾಗಿ ದೋಷವನ್ನು ಸರಿಪಡಿಸುವ ನಿಟ್ಟಿನಲ್ಲಿ, ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಪ್ರಸ್ತುತ ನೇರಳೆ ಮಾರ್ಗದಲ್ಲಿ ಮಾಗಡಿ ರಸ್ತೆ ಮತ್ತು ಚಲ್ಲಘಟ್ಟ ಹಾಗೂ ಎಂ.ಜಿ ರಸ್ತೆ ಮತ್ತು ವೈಟ್ ಫೀಲ್ಡ್ (ಕಾಡುಗೋಡಿ) ನಡುವೆ ರೈಲುಗಳು ಸಂಚರಿಸುತ್ತಿವೆ.
ಸಾಮಾನ್ಯ ಸೇವೆಯನ್ನು ಶೀಘ್ರದಲ್ಲೇ ಪುನಃಸ್ಥಾಪಿಸಲು ಪ್ರಯತ್ನಿಸುತ್ತಿದ್ದು ಪ್ರಯಾಣಿಕರು ಸಹಕರಿಸಿ ತಮ್ಮ ಪ್ರಯಾಣವನ್ನು ಯೋಜಿಸಿಕೊಳ್ಳುವಂತೆ ವಿನಂತಿಸಲಾಗಿದೆ. ಈ ಹಿನ್ನೆಲೆಯಲ್ಲಿ ಉಂಟಾಗಿರುವ ತಾತ್ಕಾಲಿಕ ಅನಾನುಕೂಲತೆಗೆ ಬಿಎಂಆರ್‌ಸಿಎಲ್ ವಿಷಾದ ವ್ಯಕ್ತಪಡಿಸುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

