ಕೋಲಾರ: ಕೋಲಾರ ಜಿಲ್ಲೆ, ಮಾಲೂರು ತಾಲೂಕಿನ ಕಣಗಲ ಸಮೀಪ ಬೈಕ್ ಡಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ರಮೇಶ್(48) ಮೃತಪಟ್ಟವರು ಎಂದು ಹೇಳಲಾಗಿದೆ. ಅತಿ ವೇಗ ಮತ್ತು ಅಜಾಗರೂಕತೆಯಿಂದ ಬೈಕ್ ಸವಾರ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆದಿದ್ದಾನೆ. ಬೈಕ್ ಹಾಗೂ ಸವಾರನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪದೇ ಪದೇ ಅಪಘಾತ ಸಂಭವಿಸುತ್ತಿದ್ದು, ಗ್ರಾಮದಲ್ಲಿ ಸ್ಪೀಡ್ ಹಂಪ್ ಹಾಕುವಂತೆ ಜನರು ಒತ್ತಾಯಿಸಿದ್ದಾರೆ. ಮಾಸ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

