HomeKarnatakaBREAKING : 'ಪೆನ್ ಡ್ರೈವ್’ ಹಂಚಿಕೆ ಪ್ರಕರಣ : ನವೀನ್ ಗೌಡ, ಚೇತನ್ ಮೂರು ದಿನ...

BREAKING : ‘ಪೆನ್ ಡ್ರೈವ್’ ಹಂಚಿಕೆ ಪ್ರಕರಣ : ನವೀನ್ ಗೌಡ, ಚೇತನ್ ಮೂರು ದಿನ ‘SIT’ ಕಸ್ಟಡಿಗೆ.!

ಬೆಂಗಳೂರು : ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನವೀನ್ ಗೌಡ , ಚೇತನ್ ರನ್ನು ಮೂರು ದಿನ ಎಸ್ ಐ ಟಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ.

ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯಿದ್ದ ಕಾರಣಕ್ಕೆ ಹೈಕೋರ್ಟ್ ಗೆ ಬಂದಿದ್ದ ಇಬ್ಬರನ್ನು ನಿನ್ನೆ ಎಸ್ ಐ ಟಿ ವಶಕ್ಕೆ ಪಡೆದು ಕೋರ್ಟ್ ಗೆ ಹಾಜರುಪಡಿಸಿತ್ತು. ವಿಚಾರಣೆ ನಡೆಸಿದ ಹಾಸನದ 2 ನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್ ಸಿ ಕೋರ್ಟ್ ನವೀನ್ ಗೌಡ , ಚೇತನ್ ರನ್ನು ಮೂರು ದಿನ ಎಸ್ ಐ ಟಿ ಕಸ್ಟಡಿಗೆ ನೀಡಿ ಆದೇಶಿಸಿದೆ.

ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಏ.23 ರಂದು ಹಾಸನದ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಎಸ್ಐಟಿ ಅಧಿಕಾರಿಗಳು ಸದ್ಯದಲ್ಲೇ ಪ್ರಜ್ವಲ್ ರೇವಣ್ಣರನ್ನು ವಶಕ್ಕೆ ಪಡೆಯಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular