HomeLatest NewsBREAKING: ಕಲಬುರಗಿ, ವಿಜಯಪುರ ಜಿಲ್ಲೆಯಲ್ಲಿ ಸರಣಿ ಭೂಕಂಪನಕ್ಕೆ ಬೆಚ್ಚಿಬಿದ್ದ ಜನ

BREAKING: ಕಲಬುರಗಿ, ವಿಜಯಪುರ ಜಿಲ್ಲೆಯಲ್ಲಿ ಸರಣಿ ಭೂಕಂಪನಕ್ಕೆ ಬೆಚ್ಚಿಬಿದ್ದ ಜನ

ಕಲಬುರಗಿ/ವಿಜಯಪುರ: ಕಲಬುರಗಿ ಜಿಲ್ಲೆಯಲ್ಲಿ ಒಂದೇ ದಿನ ನಾಲ್ಕು ಬಾರಿ ಭೂಕಂಪನ ಉಂಟಾಗಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ.

ಚಿಂಚೋಳಿ ತಾಲೂಕಿನ ಐನಾಪುರ, ಗಡಿನಿಂಗದಹಳ್ಳಿ, ಸೊಂತ, ಪಟವಾದ ಗ್ರಾಮದಲ್ಲಿ ನಾಲ್ಕು ಬಾರಿ ಭೂಮಿ ಕಂಪಿಸಿದೆ. ನಸುಕಿನ ಜಾವ, ಮಧ್ಯಾಹ್ನ, ಸಂಜೆ ಭೂಮಿ ಕಂಪಿಸಿದೆ. ಪದೇ ಪದೇ ಭೂಕಂಪನ ಹಿನ್ನೆಲೆಯಲ್ಲಿ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ.

ಅದೇ ರೀತಿ ವಿಜಯಪುರ ಸುತ್ತಮುತ್ತ ಮತ್ತೆ ಭೂಕಂಪನದ ಅನುಭವವಾಗಿದೆ. ರಾತ್ರಿ 10 ಗಂಟೆ 5 ನಿಮಿಷದ ಸುಮಾರಿಗೆ ಎರಡು ಬಾರಿ ಭೂಮಿ ಕಂಪಿಸಿದೆ. ಎರಡು ತಿಂಗಳಲ್ಲಿ ಬರೋಬ್ಬರಿ 12 ಬಾರಿ ಭೂಮಿ ಕಂಪಿಸಿದೆ. ಪದೇ ಪದೇ ಸರಣಿ ಭೂಕಂಪಕ್ಕೆ ಜನ ಬೆಚ್ಚಿಬಿದ್ದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular