ಬೆಂಗಳೂರು : ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ಏರಿಕೆ ಖಂಡಿಸಿ ಬಿಜೆಪಿ ನಾಯಕರು ಇಂದು ಸೈಕಲ್ ಏರಿ ಪ್ರತಿಭಟನೆ ನಡೆಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಿಂದ ವಿಧಾನಸೌಧದವರೆಗೆ ಸೈಕಲ್ ಜಾಥಾ ನಡೆಯಿತು.
ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ನೇತೃತ್ವದಲ್ಲಿ ಸೈಕಲ್ ಜಾಥಾ ನಡೆಯಿತು. ಈ ಸಂದರ್ಭದಲ್ಲಿ ಮಾಜಿಉಪಮುಖ್ಯಮಂತ್ರಿಗಳಾದ ಅಶ್ವಥ್ ನಾರಾಯಣ್, ಸಿಟಿ ರವಿ,ಮಾಜಿ ಸಚಿವರು, ಶಾಸಕರು, ಪರಿಷತ್ ಸದಸ್ಯರು, ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ರಾಜ್ಯ ಕಾಂಗ್ರೆಸ್ ಸರ್ಕಾರದ ಪೆಟ್ರೋಲ್-ಡಿಸೇಲ್ ಬೆಲೆ ಏರಿಕೆ ನಿರ್ಧಾರವನ್ನು ಖಂಡಿಸಿ ಇಂದು ರಾಜ್ಯಾದ್ಯಂತ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರದಲ್ಲಿ ರಸ್ತೆ ತಡೆದು ಪ್ರತಿಭಟಿಸಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕೂಡಲೇ ತಮ್ಮ ಭಂಡತನವನ್ನು ತೊರೆದು ಬೆಲೆ ಏರಿಕೆಯ ನಿರ್ಧಾರವನ್ನು ಹಿಂಪಡೆಯಬೇಕೆಂದು ಆಗ್ರಹಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆಗ್ರಹಿಸಿದ್ದಾರೆ.
ರಾಜ್ಯದ ಜನರ ಬದುಕನ್ನು ದುಸ್ತರವಾಗಿಸುತ್ತಿರುವ ಜನವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ! ಧಿಕ್ಕಾರ !
ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಇಂದು ರಾಜ್ಯಾಧ್ಯಕ್ಷರಾದ ಶ್ರೀ @BYVijayendra ಅವರ ನೇತೃತ್ವದಲ್ಲಿ ಸೈಕಲ್ ಜಾಥಾ ನಡೆಯಿತು.
ಈ ಸಂದರ್ಭದಲ್ಲಿ ಮಾಜಿ ಉಪಮುಖ್ಯಮಂತ್ರಿಗಳಾದ ಶ್ರೀ @drashwathcn,… pic.twitter.com/JFu8tH9mWP
— BJP Karnataka (@BJP4Karnataka) June 20, 2024
Live : ಮಾಧ್ಯಮವನ್ನುದ್ದೇಶಿಸಿ ರಾಜ್ಯಾಧ್ಯಕ್ಷರಾದ ಶ್ರೀ @BYVijayendra https://t.co/zdyJc2R8vQ
— BJP Karnataka (@BJP4Karnataka) June 20, 2024
Live : ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಸೈಕಲ್ ಜಾಥಾ
ಸ್ಥಳ : ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಿಂದ ವಿಧಾನಸೌಧದವರೆಗೆ https://t.co/TyldHYxFU1
— BJP Karnataka (@BJP4Karnataka) June 20, 2024

