ಬೆಂಗಳೂರು : ಪಾರಿವಾಳದ ಮಲ-ಮೂತ್ರದಿಂದ ಸೋಂಕು , ಉಸಿರಾಟದ ತೊಂದರೆಯಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದರಿಂದ ಅವುಗಳ ದಟ್ಟಣೆ ಹೆಚ್ಚಾಗಿದೆ. ಪರಿಣಾಮ ಅವುಗಳ ಮಲ-ಮೂತ್ರದಿಂದ ಸೋಂಕು ಹರಡುವುದು, ಉಸಿರಾಟ ತೊಂದರೆ ಸೇರಿದಂತೆ ಶ್ವಾಸಕೋಶ ಸಂಬಂಧಿತ ಗಂಭೀರ ಆರೋಗ್ಯ ಸಮಸ್ಯೆಗಳಾಗುತ್ತಿವೆ.
ಹಾಗಾಗಿ ಸರ್ಕಾರ ಹೊಸ ನಿಯಂತ್ರಣ ಮಾರ್ಗಸೂಚಿಗಳನ್ನು ಹೊರಡಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವಂತಿಲ್ಲ. ನಿಯಮ ಉಲ್ಲಂಘಿಸಿದರೆ ದಂಡ ಅಥವಾ ಜೈಲು ಶಿಕ್ಷೆಯನ್ನೂ ವಿಧಿಸಲಾಗುವುದು. ಹಾಗಾಗಿ ಈ ಕುರಿತು ನಿರ್ಲಕ್ಷ ಬೇಡ, ನಿಯಮ ಪಾಲಿಸಿ- ಶಿಕ್ಷೆಯಿಂದ ಪಾರಾಗಿ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

