ನವದೆಹಲಿ: ಉಡುಪಿ ಪರ್ಯಾಯ ಪುತ್ತಿಗೆ ಮಠದ ವತಿಯಿಂದ ಶುಕ್ರವಾರ ನಡೆಯುವ ಲಕ್ಷ ಕಂಠ ಗೀತ ಪಠಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಆಗಮಿಸಲಿದ್ದಾರೆ. ಕಾರ್ಯಕ್ರಮಕ್ಕಾಗಿ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಎಲ್ಲೆಡೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ನಾಳಿನ ಉಡುಪಿ ಭೇಟಿ ಬಗ್ಗೆ ಮೋದಿ ಕನ್ನಡದಲ್ಲೇ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.
ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ದೊರೆತಿರುವುದು ನನಗೆ ಗೌರವದ ವಿಷಯ. ಗೀತಾ ಪಠಣಕ್ಕಾಗಿ ಸಮಾಜದ ವಿವಿಧ ವರ್ಗಗಳ ಜನರನ್ನು ಒಂದೆಡೆ ಸೇರಿಸುವ ವಿಶೇಷ ಕಾರ್ಯಕ್ರಮ ಇದಾಗಿದೆ. ಈ ಮಠವು ನಮ್ಮ ಸಾಂಸ್ಕೃತಿಕ ಜೀವನದಲ್ಲಿ ಅತ್ಯಂತ ವಿಶೇಷ ಮಹತ್ವವನ್ನು ಹೊಂದಿದೆ. ಶ್ರೀ ಮಧ್ವಾಚಾರ್ಯರಿಂದ ಪ್ರೇರಿತವಾದ ಈ ಮಠವು, ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದೆ ಎಂದು ತಿಳಿಸಿದ್ದಾರೆ.
ಶುಕ್ರವಾರ ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಭಕ್ತರಿಗೆ ಕೃಷ್ಣಮಠ ಮತ್ತು ರಥ ಬೀದಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಹೊರ ಜಿಲ್ಲೆಗಳಿಂದಲೂ ಹೆಚ್ಚಿನ ಪೊಲೀಸರನ್ನು ಕರೆಸಲಾಗಿದ್ದು, ಎಲ್ಲೆಡೆ ಭದ್ರತೆ ಕೈಗೊಳ್ಳಲಾಗಿದೆ. ಪ್ರಧಾನಿಯವರ ಸ್ವಾಗತಕ್ಕೆ ಕಟೌಟ್ ಗಳು, ಫ್ಲೆಕ್ಸ್ ಗಳನ್ನು ಅಳವಡಿಸಲಾಗಿದ್ದು, ಉಡುಪಿ ನಗರ ಕೇಸರಿಮಯವಾಗಿದೆ. ಪ್ರಧಾನಿ ಮೋದಿ ಅವರು ಶ್ರೀ ಕೃಷ್ಣನ ದರ್ಶನ ಪಡೆದು ಲಕ್ಷ ಕಂಠ ಗೀತ ಪಠಣ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ದೊರೆತಿರುವುದು ನನಗೆ ಗೌರವದ ವಿಷಯ. ಗೀತಾ ಪಠಣಕ್ಕಾಗಿ ಸಮಾಜದ ವಿವಿಧ ವರ್ಗಗಳ ಜನರನ್ನು ಒಂದೆಡೆ ಸೇರಿಸುವ ವಿಶೇಷ ಕಾರ್ಯಕ್ರಮ ಇದಾಗಿದೆ. ಈ ಮಠವು ನಮ್ಮ ಸಾಂಸ್ಕೃತಿಕ ಜೀವನದಲ್ಲಿ ಅತ್ಯಂತ ವಿಶೇಷ ಮಹತ್ವವನ್ನು ಹೊಂದಿದೆ. ಶ್ರೀ…
— Narendra Modi (@narendramodi) November 27, 2025
