HomeLatest NewsBREAKING: ನಾಳೆ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ಬಗ್ಗೆ ಕನ್ನಡದಲ್ಲೇ ಮಾಹಿತಿ ಹಂಚಿಕೊಂಡ ಪ್ರಧಾನಿ...

BREAKING: ನಾಳೆ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ಬಗ್ಗೆ ಕನ್ನಡದಲ್ಲೇ ಮಾಹಿತಿ ಹಂಚಿಕೊಂಡ ಪ್ರಧಾನಿ ಮೋದಿ

ನವದೆಹಲಿ: ಉಡುಪಿ ಪರ್ಯಾಯ ಪುತ್ತಿಗೆ ಮಠದ ವತಿಯಿಂದ ಶುಕ್ರವಾರ ನಡೆಯುವ ಲಕ್ಷ ಕಂಠ ಗೀತ ಪಠಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಆಗಮಿಸಲಿದ್ದಾರೆ. ಕಾರ್ಯಕ್ರಮಕ್ಕಾಗಿ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಎಲ್ಲೆಡೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ನಾಳಿನ ಉಡುಪಿ ಭೇಟಿ ಬಗ್ಗೆ ಮೋದಿ ಕನ್ನಡದಲ್ಲೇ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.

ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ದೊರೆತಿರುವುದು ನನಗೆ ಗೌರವದ ವಿಷಯ. ಗೀತಾ ಪಠಣಕ್ಕಾಗಿ ಸಮಾಜದ ವಿವಿಧ ವರ್ಗಗಳ ಜನರನ್ನು ಒಂದೆಡೆ ಸೇರಿಸುವ ವಿಶೇಷ ಕಾರ್ಯಕ್ರಮ ಇದಾಗಿದೆ. ಈ ಮಠವು ನಮ್ಮ ಸಾಂಸ್ಕೃತಿಕ ಜೀವನದಲ್ಲಿ ಅತ್ಯಂತ ವಿಶೇಷ ಮಹತ್ವವನ್ನು ಹೊಂದಿದೆ. ಶ್ರೀ ಮಧ್ವಾಚಾರ್ಯರಿಂದ ಪ್ರೇರಿತವಾದ ಈ ಮಠವು, ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶುಕ್ರವಾರ ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಭಕ್ತರಿಗೆ ಕೃಷ್ಣಮಠ ಮತ್ತು ರಥ ಬೀದಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಹೊರ ಜಿಲ್ಲೆಗಳಿಂದಲೂ ಹೆಚ್ಚಿನ ಪೊಲೀಸರನ್ನು ಕರೆಸಲಾಗಿದ್ದು, ಎಲ್ಲೆಡೆ ಭದ್ರತೆ ಕೈಗೊಳ್ಳಲಾಗಿದೆ. ಪ್ರಧಾನಿಯವರ ಸ್ವಾಗತಕ್ಕೆ ಕಟೌಟ್ ಗಳು, ಫ್ಲೆಕ್ಸ್ ಗಳನ್ನು ಅಳವಡಿಸಲಾಗಿದ್ದು, ಉಡುಪಿ ನಗರ ಕೇಸರಿಮಯವಾಗಿದೆ. ಪ್ರಧಾನಿ ಮೋದಿ ಅವರು ಶ್ರೀ ಕೃಷ್ಣನ ದರ್ಶನ ಪಡೆದು ಲಕ್ಷ ಕಂಠ ಗೀತ ಪಠಣ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular