HomeLatest NewsBREAKING: ದಾವಣಗೆರೆಯಲ್ಲಿ ಗಣೇಶೋತ್ಸವ ಫ್ಲೆಕ್ಸ್ ವಿವಾದ: ತೆರವಿಗೆ ಪೊಲೀಸರ ಯತ್ನ: ಪರಿಸ್ಥಿತಿ ಉದ್ವಿಗ್ನ

BREAKING: ದಾವಣಗೆರೆಯಲ್ಲಿ ಗಣೇಶೋತ್ಸವ ಫ್ಲೆಕ್ಸ್ ವಿವಾದ: ತೆರವಿಗೆ ಪೊಲೀಸರ ಯತ್ನ: ಪರಿಸ್ಥಿತಿ ಉದ್ವಿಗ್ನ

ದಾವಣಗೆರೆ: ದಾವಣಗೆರೆ ನಗರದ ಮಟ್ಟಿಕಲ್ಲು ಪ್ರದೇಶದಲ್ಲಿ ಗುರುವಾರ ರಾತ್ರಿ ಗಣೇಶೋತ್ಸವ ಅಂಗವಾಗಿ ಅಳವಡಿಸಿದ್ದ ಫ್ಲೆಕ್ಸ್ ತೆರವಿಗೆ ಪೊಲೀಸರು ಮುಂದಾಗಿದ್ದು, ಸ್ಥಳದಲ್ಲಿ ಬಿಗುವಿನ ಪರಿಸ್ಥಿತಿ ನಿರ್ಮಾಣವಾಗಿತ್ತು.

ಮಟ್ಟಿಕಲ್ಲು ಪ್ರದೇಶದಲ್ಲಿ ವೀರ ಸಾವರ್ಕರ್ ಯುವಕರ ಸಂಘದಿಂದ ಪ್ರತಿವರ್ಷದಂತೆ ಅದ್ದೂರಿಯಾಗಿ ಗಣೇಶೋತ್ಸವ ಹಮ್ಮಿಕೊಳ್ಳಲಾಗಿದೆ. ಇದರ ಭಾಗವಾಗಿ ಛತ್ರಪತಿ ಶಿವಾಜಿ ಮಹಾರಾಜರು ವ್ಯಾಘ್ರ ನಖದಿಂದ ಅಫ್ಜಲ್ ಖಾನ್ ನನ್ನು ಹತ್ಯೆ ಮಾಡುವ ಫ್ಲೆಕ್ಸ್ ಅಳವಡಿಸಲಾಗಿತ್ತು.

ದಾವಣಗೆರೆ ಪೊಲೀಸರು ಇದನ್ನು ತೆರವುಗೊಳಿಸಲು ಮುಂದಾದ ಸಂದರ್ಭದಲ್ಲಿ ಸ್ಥಳೀಯ ಹಿಂದೂಪರ ಸಂಘಟನೆ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದಾಗಿ ಸ್ಥಳದಲ್ಲಿ ಕೆಲವು ಹೊತ್ತು ಬಿಗುವಿನ ಪರಿಸ್ಥಿತಿ ಉಂಟಾಗಿತ್ತು. ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಅಂತಿಮವಾಗಿ ಶುಕ್ರವಾರ ಬೆಳಗ್ಗೆ ಕ್ರಮ ಕೈಗೊಳ್ಳುವುದಾಗಿ ಹಿಂದು ಸಂಘಟನೆ ಮುಖಂಡರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular