HomeKarnatakaBREAKING: ವ್ಯಸನ ಮುಕ್ತ ಕೇಂದ್ರದಲ್ಲೇ ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆ

BREAKING: ವ್ಯಸನ ಮುಕ್ತ ಕೇಂದ್ರದಲ್ಲೇ ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆ

ಕೊಪ್ಪಳ: ವ್ಯಸನಮುಕ್ತ ಕೇಂದ್ರದಲ್ಲಿ ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಪ್ಪಳ ಜಿಲ್ಲೆಯ ಕುಷ್ಟಗಿಯ ವ್ಯಸನ ಮುಕ್ತ ಕೇಂದ್ರದಲ್ಲಿ ಘಟನೆ ನಡೆದಿದೆ.

ಶರಣಪ್ಪ ಉಪ್ಪಾರ(49) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಮುನಿರಾಬಾದ್ ಐಆರ್ಬಿಯಲ್ಲಿ ಶರಣಪ್ಪ ಕೆಲಸ ಮಾಡುತ್ತಿದ್ದರು. ವ್ಯಸನ ಮುಕ್ತ ಕೇಂದ್ರಕ್ಕೆ ದಾಖಲಾಗಿದ್ದರು. ಎರಡು ದಿನಗಳ ಹಿಂದೆ ಪತ್ನಿಗೆ ಕರೆ ಮಾಡಿದ್ದ ಅವರು ಮನೆಗೆ ಕರೆದುಕೊಂಡು ಹೋಗುವಂತೆ ತಿಳಿಸಿದ್ದರು.

ಆದರೆ, ಪತ್ನಿಗೆ ಕರೆ ಮಾಡಿದ್ದರೂ ಮನೆಗೆ ಕರೆದುಕೊಂಡು ಹೋಗದ ಹಿನ್ನೆಲೆಯಲ್ಲಿ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ. ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular