ಬೆಂಗಳೂರು: ಬೆಂಗಳೂರಿನಲ್ಲಿ ತಡರಾತ್ರಿವರೆಗೂ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮ ಚಟುವಟಿಕೆಗಳ ತಡೆಗೆ ಕ್ರಮ ಕೈಗೊಂಡಿದ್ದಾರೆ.
ಕೇಂದ್ರ ವಿಭಾಗ ಮತ್ತು ಗಡಿ ಠಾಣಾ ವ್ಯಾಪ್ತಿಯಲ್ಲಿ ಪರಿಶೀಲನೆ ನಡೆಸಲಾಗಿದೆ. ಕೇಂದ್ರ ವಿಭಾಗದ ಡಿಸಿಪಿ ಅಕ್ಷಯ್ ಮಚೀಂದ್ರ ಪರಿಶೀಲನೆ ನಡೆಸಿದ್ದಾರೆ. 400ಕ್ಕೂ ಹೆಚ್ಚು ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ. ರೌಡಿ ಹಿನ್ನೆಲೆ ವ್ಯಕ್ತಿಗಳಿಗೆ ಅಪರಾಧ ಚಟುವಟಿಕೆಗಳಲ್ಲಿ ಭಾಗವಹಿಸದಂತೆ ಎಚ್ಚರಿಕೆ ನೀಡಿದ್ದಾರೆ.
ರಾತ್ರೋರಾತ್ರಿ ಅಖಾಡಕ್ಕಿಳಿದ ಬೆಂಗಳೂರು ಕೇಂದ್ರ ಮತ್ತು ಆಗ್ನೇಯ ವಿಭಾಗ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಆಡುಗೋಡಿ, ವಿಲ್ಸನ್ ಗಾರ್ಡನ್, ಅಶೋಕನಗರ ಠಾಣೆ, ವಿವೇಕನಗರ ಠಾಣೆ ಸೇರಿ ಕೆಲವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪರಿಶೀಲನೆ ನಡೆಸಲಾಗಿದೆ.
ಬೆಂಗಳೂರು ಪೊಲೀಸರು ತಡರಾತ್ರಿ ರೌಡಿಗಳ ಚಳಿ ಬಿಡಿಸಿದ್ದಾರೆ. ರೌಡಿ ಚಟುವಟಿಕೆ, ಅಪರಾಧ ಚಟುವಟಿಕೆಗಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಅಕ್ರಮ ಚಟುವಟಿಕೆ ಕಡಿವಾಣಕ್ಕೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ರೌಡಿ ಹಿನ್ನೆಲೆ ವ್ಯಕ್ತಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

