HomeKarnatakaBREAKING : ಕಾಂಗ್ರೆಸ್ ಮುಖಂಡ ಶ್ರೀನಿವಾಸ್ ಕೊಲೆ ಆರೋಪಿಗಳ ಮೇಲೆ ಪೊಲೀಸರಿಂದ ಫೈರಿಂಗ್

BREAKING : ಕಾಂಗ್ರೆಸ್ ಮುಖಂಡ ಶ್ರೀನಿವಾಸ್ ಕೊಲೆ ಆರೋಪಿಗಳ ಮೇಲೆ ಪೊಲೀಸರಿಂದ ಫೈರಿಂಗ್

ಕೋಲಾರ : ಕಾಂಗ್ರೆಸ್ ಮುಖಂಡ ಶ್ರೀನಿವಾಸ ಕೊಲೆ ಆರೋಪಿಗಳ ಮೇಲೆ ಪೊಲೀಸರು ಫೈರಿಂಗ್ ನಡೆಸಿರುವ ಘಟನೆ ಕೋಲಾರ ಜಿಲ್ಲೆಯ ಲಕ್ಷ್ಮಿ ಸಾಗರ ಅರಣ್ಯ ಪ್ರದೇಶದ ಬಳಿ ನಡೆದಿದೆ.

ಕಾಂಗ್ರೆಸ್ ಮುಖಂಡ ಶ್ರೀನಿವಾಸ್ ಕೊಲೆ ಪ್ರಕರಣ ಸಂಬಂಧ ಆರೋಪಿಗಳನ್ನು ಬಂಧಿಸಿ ಕರೆತರಲಾಗುತ್ತಿದ್ದ ವೇಳೆ ಪೊಲೀಸರ ಮೇಲೆ ಆರೋಪಿಗಳು ಹಲ್ಲೆಗೆ ಮುಂದಾಗಿದ್ದಾರೆ ಈ ವೇಳೆ ಪೊಲೀಸರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೊಲೆ ಆರೋಪಿಗಳಾದ ವೇಣುಗೋಪಾಲ್, ಮನೀಂದ್ರ ಹಾಗೂ ಸಂತೋಷ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದು, ಆರೋಪಿಗಳು ಗಾಯಗೊಂಡಿದ್ದಾರೆ.  ಆರೋಪಿಗಳ ಹಲ್ಲೆಯಿಂದ ಪೊಲೀಸರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನಲ್ಲಿ ಕಾಂಗ್ರೆಸ್‌ ಮುಖಂಡ ಎಂ. ಶ್ರೀನಿವಾಸ್‌ ಅವರನ್ನು ಹಾಡಹಗಲೇ ನಡು ರಸ್ತೆಯಲ್ಲಿ ಚಾಕು, ಚೂರಿ ಹಾಗೂ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ತೀವ್ರ ಗಾಯಗೊಂಡಿದ್ದ ಶ್ರೀನಿವಾಸ್‌ ಅವರನ್ನು ಆಸ್ಪತ್ರೆಗೆ ದಾಖಲಿಸಿತಾದರೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular