HomeLatest NewsBREAKING: ರೇವ್ ಪಾರ್ಟಿ ಮೇಲೆ ಪೊಲೀಸರ ದಾಳಿ: 35 ಯುವತಿಯರು ಸೇರಿ 115 ಮಂದಿ ವಶಕ್ಕೆ

BREAKING: ರೇವ್ ಪಾರ್ಟಿ ಮೇಲೆ ಪೊಲೀಸರ ದಾಳಿ: 35 ಯುವತಿಯರು ಸೇರಿ 115 ಮಂದಿ ವಶಕ್ಕೆ

ಬೆಂಗಳೂರು: ದೇವಿಕೆರೆ ಕ್ರಾಸ್ ಬಳಿ ರೇವ್ ಪಾರ್ಟಿ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಅಯಾನ್ ರೆಸಾರ್ಟ್ ನಲ್ಲಿ ರೇವ್ ಪಾರ್ಟಿ ನಡೆಯುತ್ತಿದ್ದ ವೇಳೆಯಲ್ಲಿ ದಾಳಿ ಮಾಡಲಾಗಿದೆ.

ಬೆಂಗಳೂರು ದಕ್ಷಿಣ ತಾಲೂಕಿನ ದೇವಿಗೆರೆ ಬಳಿಯ ರೆಸಾರ್ಟ್ ನಲ್ಲಿ ಪಾರ್ಟಿ ನಡೆಯುತ್ತಿತ್ತು. ಬೆಂಗಳೂರು ದಕ್ಷಿಣ ಎಸ್ಪಿ ಶ್ರೀನಿವಾಸ ಗೌಡ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ದಾಳಿಯ ವೇಳೆ 35 ಯುವತಿಯರು ಸೇರಿದಂತೆ 115 ಜನರನ್ನು ವಶಕ್ಕೆ ಪಡೆಯಲಾಗಿದೆ. 115 ಜನರಿಗೂ ಬೆಂಗಳೂರು ದಕ್ಷಿಣ ಜಿಲ್ಲಾಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ನಡೆಸಲಾಗಿದೆ. ಕಗ್ಗಲೀಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular